ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ; ಹಳೆ ಮೈಸೂರಲ್ಲೂ ಪಕ್ಷ ವಿಸ್ತರಣೆ: ನಳಿನ್
Team Udayavani, Oct 16, 2020, 6:10 AM IST
ಸಾಂದರ್ಭಿಕ ಚಿತ್ರ
ಮೈಸೂರು: ದಕ್ಷಿಣ ಕರ್ನಾಟಕದಲ್ಲಿರುವ ಸಂಘಟನಾತ್ಮಕ ರಾಜಕಾರಣವನ್ನು ಹಳೆ ಮೈಸೂರು ಪ್ರಾಂತ್ಯದಲ್ಲೂ ವಿಸ್ತರಿಸುವ ಕೆಲಸ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಮೈಸೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಜರಗಿದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿ. ಅದಕ್ಕಾಗಿಯೇ ಮೈಸೂರಿ ನಿಂದ ಸಂಕಲ್ಪ ಯಾತ್ರೆಯನ್ನು ಶುರು ಮಾಡುತ್ತಿದ್ದೇನೆ ಎಂದು ಹೇಳಿದರು.
ಪಕ್ಷ ಸಂಘಟನೆಗಾಗಿ ಹದಿನೈದು ದಿನಗಳಿಗೊಮ್ಮೆ ಪದಾಧಿಕಾರಿಗಳ ಸಭೆ, ತಿಂಗಳಿಗೊಮ್ಮೆ ಕಾರ್ಯ ಕಾರಿಣಿ ಸಭೆ ನಡೆಸಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಯೋಜನೆ ಗಳನ್ನು ಜನರಿಗೆ ತಲುಪಿಸಲಾಗುವುದು ಎಂದರು.
ಅಭಿವೃದ್ಧಿಯೇ ನಮ್ಮ ಮಂತ್ರ
ನಾವು ಟೀಕೆ ಮಾಡುವ ಬದಲು ಅಭಿವೃದ್ಧಿ ಮಂತ್ರ, ಸಾಧನೆ, ಸಂಘಟನೆ ಆಧಾರದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದ ಅವರು, ಗ್ರಾಪಂ ಚುನಾವಣೆ ಎದುರಿಸಲು ಪಕ್ಷ ತಯಾರಾಗಿದೆ. ಜಿಪಂ, ತಾಪಂ ಚುನಾವಣೆ ನಡೆದರೂ ನಾವು ತಯಾರಿದ್ದೇವೆ ಎಂದು ಹೇಳಿದರು.
2 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಸಚಿವ ಸೋಮಶೇಖರ್ ವಿಶ್ವಾಸ
ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಆರ್ಥಿಕ ಚೇತರಿಕೆಗಾಗಿ 39,300 ಕೋ.ರೂ.ಗಳ ಆರ್ಥಿಕ ಸ್ಪಂದನ ಕಾರ್ಯಕ್ರಮ ರೂಪಿಸಿ ಬೆಂಗಳೂರು, ಮೈಸೂರಿನಲ್ಲಿ ಜಾರಿಗೆ ತರಲಾಗಿದೆ. ಮುಂದೆ ಬೆಳಗಾವಿ, ಕಲಬುರಗಿಯಲ್ಲೂ ನಡೆಯಲಿದೆ ಎಂದು ಸೋಮಶೇಖರ್ ಹೇಳಿದರು.
ಸಮಾರಂಭದಲ್ಲಿ ಸಂಸದ ಪ್ರತಾಪ್‌ಸಿಂಹ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಹರ್ಷ ವರ್ಧನ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಮೈಸೂರು ನಗರ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಎಸ್. ಶ್ರೀವತ್ಸ ಉಪಸ್ಥಿತರಿದ್ದರು.
ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ನಿರ್ಮಲ್ ಕುಮಾರ್ ಸುರಾನ, ಪ್ರತಾಪ್‌ಸಿಂಹ, ಶಂಕರಪ್ಪ, ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಪಿ. ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ಮೊದಲಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮದು ಕೇಡರ್ ಬೇಸ್ ಪಾರ್ಟಿ: ಸಿ.ಟಿ. ರವಿ
ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಹತ್ತಾರು ಜವಾಬ್ದಾರಿ ಕೊಡುವುದು ಬಿಜೆಪಿ ಮಾತ್ರವಾಗಿದ್ದು, ನಮ್ಮದು ಕೇಡರ್ ಬೇಸ್ ಪಾರ್ಟಿ ಹೊರತು ಲೀಡರ್ ಬೇಸ್ ಪಾರ್ಟಿ ಯಲ್ಲ. ಕೇಡರ್‌ಗಳೇ ಲೀಡರ್‌ಗಳಾಗುವುದು ಬಿಜೆಪಿಯಲ್ಲಿ ಮಾತ್ರ ಎನ್ನುವುದಕ್ಕೆ ನಾನೇ ಉದಾಹರಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಪದಾಧಿಕಾರಿಗಳ ಸಭೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು