ಚಂಪಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ
Team Udayavani, Nov 26, 2017, 11:18 AM IST
ಬೆಂಗಳೂರು: ಮೈಸೂರಿನಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ಅವರು ರಾಜಕೀಯ ವಿಚಾರ ಪ್ರಸ್ತಾಪಿಸಿದ್ದ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಕನ್ನಡ ನಾಡು, ನುಡಿಯ ಏಳಿಗೆ ಬಗ್ಗೆ ಚರ್ಚೆ ನಡೆಯಬೇಕಿದ್ದ ಸಮ್ಮೇಳನದ ವೇದಿಕೆಯನ್ನು ಚಂಪಾ ರಾಜಕೀಯ ವೇದಿಕೆಯಾಗಿ ಬಳಸಿಕೊಂಡಿದ್ದು ದುರದೃಷ್ಟಕರ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ’ ಎಂದು ಹೇಳಿದರು.
ಕನ್ನಡ ಶಾಲೆಗಳು ಮುಚ್ಚಿ ಹೋಗುತ್ತಿರುವ ಬಗ್ಗೆ, ಕನ್ನಡವನ್ನು ಉಳಿಸಿ ಬೆಳೆಸುವ ಬಗ್ಗೆ ಸಾಹಿತ್ಯ ಸಮ್ಮೇಳನ ಚರ್ಚಾ ವೇದಿಕೆಯಾಗಬೇಕಿತ್ತು. ಆದರೆ, ರಾಜಕೀಯ ವೇದಿಕೆಯಾಗಿ ಬಳಕೆಯಾಗಿದೆ. ಚಂಪಾ ಅವರು ಒಂದು ಪಕ್ಷದ ಪರವಾಗಿ ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವುದು ಸರಿಯಲ್ಲ. ಯಾರೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.
“ಚಂಪಾ ಮಾತನ್ನು ಹುಬ್ಬಳ್ಳಿಯಲ್ಲೇ ಜನ ಕೇಳುವುದಿಲ್ಲ. ಹೀಗಿರುವಾಗ ರಾಜ್ಯದ ಜನ ಹೇಗೆ ಕೇಳುತ್ತಾರೆ’ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತ್ರ ಈ ವಿಚಾರದಲ್ಲಿ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ. ಸಮ್ಮೇಳನಾಧ್ಯಕ್ಷ$ಚಂದ್ರಶೇಖರ ಪಾಟೀಲರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.