ಉ.ಕ.ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿ: ಶಾಸಕ ಯತ್ನಾಳ
Team Udayavani, Jun 1, 2019, 3:04 AM IST
ಬೆಳಗಾವಿ: ಈ ಭಾಗದ ಎಲ್ಲ 14 ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿಕೊಟ್ಟ ಉತ್ತರ ಕರ್ನಾಟಕದವರಿಗೆ ಈ ಸಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಜಾತಿಯವರನ್ನಾದರೂ ಮಾಡಲಿ. ಆದರೆ ಉತ್ತರ ಕರ್ನಾಟಕದವರಿಗೆ ಈ ಅವಕಾಶ ಸಿಗಬೇಕು. ಲಿಂಗಾಯತ ಸಮುದಾಯದ ಯಡಿಯೂರಪ್ಪ ಈಗಾಗಲೇ ಈ ಸ್ಥಾನ ಅಲಂಕರಿಸಿರುವುದರಿಂದ ಹಿಂದುಳಿದವರು, ಬ್ರಾಹ್ಮಣರು ಸೇರಿ ಯಾವುದೇ ಸಮುದಾಯದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು. ನಾನು ಕೂಡ ಅಧ್ಯಕ್ಷರಾಗಬೇಕೆನ್ನುವ ಬಯಕೆ ಇದೆ. ಮಾಡದಿದ್ದರೂ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರ ಉಳಿಯದು: ರಾಜ್ಯ ಸಮ್ಮಿಶ್ರ ಸರ್ಕಾರ ಬೀಳುವ ಹಂತಕ್ಕೆ ಬಂದಿದೆ. ಅಲ್ಲಿ ಕೆಲವರನ್ನು ಸಮಾಧಾನ ಪಡಿಸಲು ಮುಂದಾದರೆ ಮತ್ತೂಂದು ಗುಂಪಿನಲ್ಲಿ ಭಿನ್ನಮತ ಸ್ಫೋಟ ಆಗುತ್ತದೆ. ಅಲ್ಲಿ ಯಾರಿಗಾದರೂ ಅಸಮಾಧಾನ ಮಾಡಿದರೆ ಉಳಿದವರು ಸುಮ್ಮನೇ ಕುಳಿತುಕೊಳ್ಳುವುದಿಲ್ಲ. ಹೀಗಾಗಿ ಬಹಳ ದಿನ ಈ ಸರ್ಕಾರ ಉಳಿಯುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.