BJP ಪರಿವರ್ತನಾ ಯಾತ್ರೆಗೆ ಚಾಲನೆ; ಸಿದ್ದು ಸರ್ಕಾರ ಕಿತ್ತೊಗೆಯಿರಿ: ಶಾ
Team Udayavani, Nov 2, 2017, 3:26 PM IST
ಬೆಂಗಳೂರು: ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ರಾಲಿ ಸರ್ಕಾರ, ಸಚಿವರನ್ನು ಬದಲಿಸಲು ಮಾತ್ರ ಅಲ್ಲ. ಕರ್ನಾಟಕದ ಸಮಗ್ರ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಸ್ ಯಡಿಯೂರಪ್ಪ ಸಾರಥ್ಯದಲ್ಲಿ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
ಗುರುವಾರ ತುಮಕೂರು ರಸ್ತೆಯಲ್ಲಿ ನಡೆದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಿದ್ದರಾಮಯ್ಯ ಸರ್ಕಾರ ಅತೀ ಭ್ರಷ್ಟ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ. ಕೆರೆಗಳನ್ನು ಬಿಲ್ಡರ್ ಗಳಿಗೆ ಮಾರುವ ಮೂಲಕವೂ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ನೀಡಿದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಗೊತ್ತಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೆರವು ನೀಡುತ್ತಿದೆ. ಅನುದಾನ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ. 1 ಲಕ್ಷ 30 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯ್ತು ಸಿದ್ದರಾಮಯ್ಯಜೀ ಎಂದು ಪ್ರಶ್ನಿಸಿದರು.
960 ಕೋಟಿ ರೂಪಾಯಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಕೊಟ್ಟಿದ್ದೇವೆ. 4563 ಕೋಟಿ ರೂಪಾಯಿ ಅಮೃತ ಯೋಜನೆಗೆ ಕೊಟ್ಟಿದ್ದೇವೆ, ರೈಲ್ವೆ ಯೋಜನೆಗೆ 2197 ಕೋಟಿ ರೂಪಾಯಿ, 39000 ಕೋಟಿ ಮುದ್ರಾ ಯೋಜನೆಗೆ ಕೊಟ್ಟಿದ್ದೇವೆ.
ಸಿದ್ದರಾಮಯ್ಯನವರಿಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವ ಮಾಡುವ ಬಗ್ಗೆ ಉತ್ಸಾಹವಿಲ್ಲ, ಆದರೆ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ನೆರವೇರಿಸಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ 19 ಹಿಂದೂ ಕಾರ್ಯಕರ್ತರ ಕಗ್ಗೊಲೆ ಆಗಿದೆ. ದೇಶದ ರಕ್ಷಣೆ, ರಾಜ್ಯದ ಸುರಕ್ಷತೆ ಬಗ್ಗೆ ಸಿದ್ದರಾಮಯ್ಯನವರಿಗೆ ಕಾಳಜಿ ಇಲ್ಲ ಎಂದರು.
ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ಮೋದಿಜೀವರ ಜತೆ ಕೈ ಜೋಡಿಸಿ ಕರ್ನಾಟಕದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಶಾ ಈ ಸಂದರ್ಭದಲ್ಲಿ ಮನವಿ ಮಾಡಿದರು.
ಅಮಿತ್ ಶಾ ಅವರು ಆಗಮಿಸಿದ್ದಾಗ ಮೈಸೂರು ಪೇಟಾ ತೊಡಿಸಿ ಬರಮಾಡಿಕೊಳ್ಳಲಾಯಿತು. ಭಾಷಣದ ಆರಂಭದಲ್ಲೇ ಭಾವಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಂದು ಉಲ್ಲೇಖಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಹಸಿರು ಶಾಲು ಹೊದಿಸಿ ಶಾ ಅವರು ಸನ್ಮಾನಿಸಿ ಎತ್ತಿನಬಂಡಿಯ ಸ್ಮರಣಿಕೆಯನ್ನು ನೀಡಿದರು.
ಬಿಜೆಪಿ ಬಾವುಟ ಹಾರಿಸುವ ಮೂಲಕ ಯಾತ್ರೆಗೆ ಚಾಲನೆ:
ಬಿಜೆಪಿ ಬಾವುಟವನ್ನು ಹಾರಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ರಥಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. 224 ಕ್ಷೇತ್ರಕ್ಕೆ 74 ದಿನಗಳ ಕಾಲ ಪರಿವರ್ತನಾ ಯಾತ್ರೆ ನಡೆಯಲಿದೆ.
ಕಾರ್ಯಕ್ರಮ ವಿಳಂಬ:
ಜನರ ಕೊರತೆಯಿಂದಾಗಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2ಗಂಟೆಗಳ ಕಾಲ ವಿಳಂಬವಾಯಿತು.
ಶಾ ಭಾಷಣದ ನಡುವೆಯೇ ಎದ್ದು ಹೋದ ಕಾರ್ಯಕರ್ತರು:
ಅಮಿತ್ ಶಾ ಅವರ ಭಾಷಣದ ನಡುವೆಯೇ ಕಾರ್ಯಕರ್ತರು ತಂಡೋಪ ತಂಡವಾಗಿ ಎದ್ದು ಹೋದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.