BJP: ಯತ್ನಾಳ್ ಉಚ್ಚಾಟನೆಗೆ ವಿಜಯೇಂದ್ರ ಬಣ ಪಟ್ಟು
Team Udayavani, Nov 30, 2024, 6:30 AM IST
ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬಣ ರಾಜಕೀಯ ಈಗ ಮತ್ತೊಂದು ಮಜಲು ತಲುಪಿದ್ದು, ಯತ್ನಾಳ್‌ರನ್ನು ಕೂಡಲೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡಬೇಕೆಂದು ವಿಜಯೇಂದ್ರ ಬಣ ಒತ್ತಾಯಿಸಿದೆ. ಅಲ್ಲದೆ, ತಾಕತ್ತಿದ್ದರೆ ವಕ್ಫ್ ಹೋರಾಟಕ್ಕೆ ಅನುಮತಿ ಕೊಟ್ಟ ರಾಷ್ಟ್ರೀಯ ನಾಯಕ ಯಾರೆಂಬುದನ್ನು ಹೇಳುವಂತೆಯೂ ಸವಾಲು ಹಾಕಿದೆ.
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ 20ಕ್ಕೂ ಹೆಚ್ಚು ಮಾಜಿ ಶಾಸಕರು ಸಭೆ ನಡೆಸಿ ಯತ್ನಾಳ್ ಉಚ್ಚಾಟನೆಗೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಂದ ಯತ್ನಾಳ್ ಸುಪಾರಿ ಪಡೆದಿದ್ದಾರೆಂದು ಆರೋಪಿಸಿ ಅವರನ್ನು ವರಿಷ್ಠರು ತತ್‌ಕ್ಷಣವೇ ಉಚ್ಚಾಟಿಸಿ ಖಡಕ್ ಸಂದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.
ನೀನು ಬ್ಲ್ಯಾಕ್ ಮೇಲ್ ಮಾಸ್ಟರಾ?
ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ಡಿ.ವಿ. ಸದಾನಂದ ಗೌಡರು ಬಿಜೆಪಿಯ ಹಿತದೃಷ್ಟಿಯಿಂದ ಕೆಲವು ಸಲಹೆಗಳನ್ನು ನೀಡಿದ್ದಾರೆ. ಆದರೆ ಸ್ವಯಂಘೋಷಿತ ಮಹಾನಾಯಕರೊಬ್ಬರು ಸದಾನಂದ ಗೌಡರು ಮಾತಾಡಿದ್ದಕ್ಕೆ ಬಿಚ್ಚಿಡುತ್ತೇನೆ ಎಂದು ಹೇಳುತ್ತಿದ್ದಾರೆ. ನೀನು ಏನು ಬ್ಲ್ಯಾಕ್ ಮೇಲ್ ಮಾಸ್ಟರಾ? ಎಂದು ರೇಣುಕಾಚಾರ್ಯ ಕಿಡಿಕಾರಿದರು.
ನಮ್ಮಲ್ಲಿ ಒಡಕುಗಳಿಲ್ಲ
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ಮಾತನಾಡಿ, ನಮ್ಮಲ್ಲಿ ಯಾವುದೇ ರೀತಿಯ ಒಡಕುಗಳಿಲ್ಲ. ಕೆಲವರು ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನ ಈಡೇರುವುದಿಲ್ಲ. ಕೆಲವರು ಪರ್ಯಾಯ ನಾಯಕತ್ವ ಸೃಷ್ಟಿಸಲು ಹೊರಟಿದ್ದಾರೆ. ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.