ಬಿಜೆಪಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಖಚಿತ: ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
Team Udayavani, Feb 22, 2022, 9:04 AM IST
ಬೆಂಗಳೂರು: ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿಯು 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯಲಿದೆ. ಉತ್ತರದ ಖಾನಾಪುರ ಮತ್ತು ದಕ್ಷಿಣದ ರಾಮನಗರದಲ್ಲಿ ಜನತೆಯೂ ಬಿಜೆಪಿ ಅಧಿಕಾರ ಪಡೆಯಲು ನೆರವಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆ ಖಾನಾಪುರದ ಪ್ರಮುಖ ಮುಖಂಡರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಪ್ರಾರಂಭಗೊಂಡಿದೆ. ಬಿಜೆಪಿ ಆಳವಾಗಿ ಬೇರೂರಿ ಶಕ್ತಿ ಪಡೆದಿರದ ಪ್ರದೇಶಗಳಲ್ಲಿ ಪಕ್ಷವು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ ಎಂದರು.
ಇದನ್ನೂ ಓದಿ:ಮಂಗಳೂರು, ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ; ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ
ರಾಜ್ಯದ ರಾಜಕೀಯದಲ್ಲಿ ಇಂದು ಅತ್ಯಂತ ಮಹತ್ವದ ದಿನ. ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನೆಲೆಯಾಗಿದ್ದ ಜಿಲ್ಲೆಗಳಲ್ಲಿ ಇಂದು ದೊಡ್ಡ ಬದಲಾವಣೆಯಾಗುತ್ತಿದೆ. ಬರುವಂತಹ ದಿನಗಳಲ್ಲಿ ಎಲ್ಲ ಕಡೆ ಬಿಜೆಪಿಯ ಕಮಲ ಅರಳಲಿದೆ. ಬಿಜೆಪಿ ಪರವಾದ ಈ ಅಲೆಯು ದೊಡ್ಡ ಶಕ್ತಿಯಾಗಿ ಪರಿವರ್ತನೆಗೊಳ್ಳಲಿದೆ ಎಂದು ಅವರು ತಿಳಿಸಿದರು.
ಇದೊಂದು ಹೊಸ ದಿಕ್ಸೂಚಿ. ಈಗ ಪಕ್ಷ ಸೇರಿದ ಅರವಿಂದ ಪಾಟೀಲ್, ಲಿಂಗೇಶ್ ಕುಮಾರ್ ಮತ್ತಿತರರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಿಗಳು. ಹೀಗಾಗಿ ಪಕ್ಷ ಹೆಚ್ಚು ಬಲಯುತವಾಗಿ ಬೆಳೆಯಲಿದೆ. ಬಿಜೆಪಿ ಸಕಾರಾತ್ಮಕ ರಾಜಕೀಯ ಮಾಡುತ್ತದೆ. ಆಡಳಿತಕ್ಕೆ ಬಂದ ಬಳಿಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಜನರಿಗಾಗಿ ಮೈಮುರಿದು ದುಡಿಯುತ್ತಿದ್ದೇವೆ. ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯಾದ್ಯಂತ ದೃಢವಾಗಿ ಬೆಳೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.