ಗುಜರಾತ್‌ನಲ್ಲಿ ಬಿಜೆಪಿಗೇ ಜಯ?
Team Udayavani, Oct 25, 2017, 7:25 AM IST
ಹೊಸದಿಲ್ಲಿ: ಗುಜರಾತ್ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿ ಕೊಳ್ಳಲಿದೆ. ಪಟೇಲರಿಗೆ ಮೀಸಲು ದೊರಕಿಸಲು ಹೋರಾಟ ನಡೆಸಿದ ಹಾರ್ದಿಕ್ ಪಟೇಲ್ ಮತ್ತವರ ಬೆಂಬಲಿಗರಿಗೆ ನಿರೀಕ್ಷಿತ ಪ್ರೋತ್ಸಾಹ ಸಿಗಲಾರದು. ವಿಧಾನಸಭೆಗೆ ಚುನಾ ವಣೆಯ ದಿನಾಂಕ ಬುಧವಾರ ಪ್ರಕಟ ವಾಗುವ ನಿರೀಕ್ಷೆಯ ನಡುವೆಯೇ “ಇಂಡಿಯಾ ಟುಡೇ’ -“ಆ್ಯಕ್ಸಿಸ್ ಮೈ ಇಂಡಿಯಾ’ ಸಂಸ್ಥೆ ಜಂಟಿಯಾಗಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ.
ಸೆ.15ರಿಂದ ಅ.15ರ ವರೆಗೆ 182 ಕ್ಷೇತ್ರಗಳಲ್ಲಿ ಈ ಸಮೀಕ್ಷೆ ನಡೆಸಿದಾಗ ಆಡಳಿತಾರೂಢ ಬಿಜೆಪಿಗೆ 115-125 ಸ್ಥಾನಗಳು ಲಭಿಸುವ ಸಾಧ್ಯತೆ ಗೋಚರಿಸಿದೆ. 2007 ಮತ್ತು 2012ರ ಫಲಿತಾಂಶದ ಮಾದರಿಯಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಪ್ರಧಾನ ವಿಪಕ್ಷ ಕಾಂಗ್ರೆಸ್ 57-65 ಸ್ಥಾನಗಳನ್ನು ಗಳಿಸಲಿದೆ. ಹಾಲಿ ವಿಧಾನಸಭೆಯಲ್ಲಿ ಪಕ್ಷ 60 ಸ್ಥಾನಗಳನ್ನು ಗೆದ್ದಿತ್ತು. ಒಬಿಸಿ ನಾಯಕ ಅಲ್ಪೇಶ್ ಠಾಕೂರ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ನಡೆಸಿದ ಹೋರಾಟ ಕೊಂಚ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಧನಾತ್ಮಕವಾಗಲಿದೆ.
182 ಸ್ಥಾನಗಳ ಪೈಕಿ ಪಟೇಲ್ ಸಮುದಾಯ 21 ಕ್ಷೇತ್ರಗಳಲ್ಲಿ ಭಾರಿ ಪ್ರಭಾವ ಹೊಂದಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇ.16ರಷ್ಟು ಪ್ರಮಾಣ ದಲ್ಲಿ ಪಟೇಲರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.