BJP; ವಿಪಕ್ಷ ನಾಯಕನ ಆಯ್ಕೆ:ಮಹತ್ವದ ಸಭೆಗೆ ಯತ್ನಾಳ್ ಸೇರಿ ಐವರು ಶಾಸಕರು ಗೈರು
ನ ದೈನ್ಯಂ, ನ ಪಲಾಯನಂ...!!.. ಬಿಜೆಪಿಗೆ ಈಗ endless challenge!!
Team Udayavani, Nov 17, 2023, 7:38 PM IST
ಬೆಂಗಳೂರು : ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್‌ನಲ್ಲಿ ಶುಕ್ರವಾರ ಸಂಜೆ ನಡೆಸಲಾಗುತ್ತಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಮಾಡುವ ಮುನ್ನ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂದಿದೆ.
ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕ್ಷಕರಾಗಿ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ , ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಕೋಟಾ ಶ್ರೀನಿವಾಸ್ ಪೂಜಾರಿ ಅವರು ವೇದಿಕೆಯ ಮೇಲೆ ಹಾಜರಿದ್ದರು.
ಐವರು ಶಾಸಕರು ಗೈರು
ಮಹತ್ವದ ಶಾಸಕಾಂಗ ಸಭೆಗೆ ಐವರು ಬಿಜೆಪಿ ಶಾಸಕರು ಗೈರಾಗಿದ್ದರು. ಬಿಜೆಪಿ ಹಿರಿಯ ನಾಯಕ ಬಸನ ಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೂ ಮುನ್ನ ಹೊರ ನಡೆದಿದ್ದು, ಅವರೊಂದಿಗೆ ಶಾಸಕ ರಮೇಶ್ ಜಾರಕಿಹೊಳಿ ಯೂ ಕಾರಿನಲ್ಲಿ ತೆರಳಿದ್ದಾರೆ. ಇನ್ನುಳಿದಂತೆ ಶಾಸಕ ಎಸ್.ಟಿ. ಸೋಮಶೇಖರ್ ಅವರು ಗೈರಾಗಿ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಬಾಲಚಂದ್ರ ಜಾರಕಿಹೊಳಿ ಮತ್ತು ಶಿವರಾಂ ಹೆಬ್ಬಾರ್ ಕೂಡ ಗೈರಾಗಿದ್ದಾರೆ.
ಸಭೆಗೆಂದು ಆಗಮಿಸಿದ್ದ ಯತ್ನಾಳ್ ಅವರು ಆರಂಭಕ್ಕೂ ಮುನ್ನ ಹೊರ ಬಂದು ”ಇದು ಬಡವರು ಚಹಾ ಕುಡಿಯುವ ಜಾಗ ಅಲ್ಲ. ಚಹಾ ಕುಡಿಯಲು ಹೋಗುತ್ತಿದ್ದೇವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿ ರಮೇಶ್ ಜಾರಕಿಹೊಳಿ ಅವರೊಂದಿಗೆ ತೆರಳಿದ್ದಾರೆ.
”ನ ದೈನ್ಯಂ, ನ ಪಲಾಯನಂ… ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಸರಳವಾಗಿ ಸವಾಲುಗಳು.” ಎಂದು ಸಭೆ ಬಹಿಷ್ಕರಿಸಿದ ಬೆನ್ನಲ್ಲೇ ಯತ್ನಾಳ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ನ ದೈನ್ಯಂ, ನ ಪಲಾಯನಂ 🙏
A warrior cannot complain or regret anything. His life is an endless challenge, and challenges cannot possibly be good or bad. Challenges are simply challenges.
— Basanagouda R Patil (Yatnal) (@BasanagoudaBJP) November 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.