ಇಂದು ಜನಸ್ಪಂದನ ಸಮಾವೇಶ; ಹೊಸ ಯೋಜನೆ ಪ್ರಕಟನೆ ನಿರೀಕ್ಷೆ ; 3 ಲಕ್ಷ ಜನ ಸೇರುವ ಸಾಧ್ಯತೆ
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ 3 ವರ್ಷಗಳ ಸಾಧನೆಯ ಅನಾವರಣ
Team Udayavani, Sep 10, 2022, 6:40 AM IST
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಬೃಹತ್ ಸಮಾವೇಶಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರದಲ್ಲಿ ಕಣ್ಣು ಹಾಯಿಸಿದಲ್ಲೆಲ್ಲಾ ಬಿಜೆಪಿ ನಾಯಕರ ಫೋಟೋಗಳು, ಕಟೌಟ್‌ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಿಸುವುದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಈ ಸಮಾವೇಶದ ಉದ್ದೇಶವಾಗಿದೆ.
ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವೆ ಸ್ಮತಿ ಇರಾನಿ ಹಾಗೂ ರಾಜ್ಯ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ವಿಶೇಷವಾಗಿ ಬಯಲು ಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳ ಜನರನ್ನು ಸೇರಿಸಲು ಬಿಜೆಪಿ ಯೋಜಿಸಿದ್ದು, ಸುಮಾರು 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನರನ್ನು ಕರೆ ತರಲು 5 ಸಾವಿರ ಬಸ್‌ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಮಾವೇಶವು ನಿರ್ವಿಘ್ನವಾಗಿ ನಡೆಯಲಿ ಎಂಬ ಉದ್ದೇಶದಿಂದ ಶುಕ್ರವಾರ ಬೆಳಗ್ಗೆ ವೇದಿಕೆ ಸ್ಥಳದಲ್ಲಿ ಗಣಪತಿ ಹೋಮ ಮಾಡಲಾಗಿದೆ.
ಯೋಜನೆ ಘೋಷಣೆ ನಿರೀಕ್ಷೆ:
ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ. ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲು ತೀರ್ಮಾಸಿದೆ ಎಂದು ಹೇಳಲಾಗಿದೆ. ಜನಸ್ಪಂದನ ಸಮಾವೇಶದ ಮೂಲಕ ಬಿಜೆಪಿ ನಾಯಕರು ಸಂದೇಶ ರವಾನೆ ಮಾಡಲು ನಿರ್ಧರಿಸಿದ್ದಾರೆ.
ಸಚಿವರ ಉಸ್ತುವಾರಿ:
ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ.
ಬಿಜೆಪಿ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜನರಿಂದ ಜನರಿಗಾಗಿಯೇ ಜನಸ್ಪಂದನೆ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ಜನತೆಗೆ ನೀಡಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಗಾಗಿಯೇ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರೇ ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಜನರಿಗಾಗಿಯೇ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದರಿಂದ ಜನಸ್ಪಂದನೆ ಸಮಾವೇಶವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
3 ಲಕ್ಷ- ಜನರಿಗೆ ಭೋಜನ ಮತ್ತು ಆಸನ ವ್ಯವಸ್ಥೆ
200 ಎಕರೆ- ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ
5 ಸಾವಿರ – ಬಸ್‌ಗಳ ವ್ಯವಸ್ಥೆ
40 ಎಕರೆ- ಪ್ರದೇಶದಲ್ಲಿ ಪೆಂಡಾಲ್
ಅಭಿವೃದ್ಧಿ ಪರ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜನತೆಯ ನಡುವಿನ ಸ್ಪಂದನೆಯ ಸೇತುವೆಯೇ “ಜನಸ್ಪಂದನ ಸಮಾವೇಶ’. ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಲಕ್ಷಾಂತರ ಮಂದಿ ಅತ್ಯುತ್ಸಾಹದಿಂದ ಆಗಮಿಸಲಿದ್ದಾರೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.