ಸಿದ್ಧತಾ ಲೋಪದಿಂದ ಬಿಜೆಪಿ ಯಾತ್ರೆ ವೈಫ‌ಲ್ಯ

Team Udayavani, Nov 9, 2017, 10:29 AM IST

09-14.jpg

ಬೆಂಗಳೂರು: ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಜನರನ್ನು ಸೇರಿಸಲು ವಿಫ‌ಲವಾಗಿ, ವೈಫ‌ಲ್ಯದ ಹಣೆಪಟ್ಟಿ ಕಟ್ಟಲು ಪಕ್ಷದ ನಾಯಕರು ಮಾಡಿದ ಯಡವಟ್ಟುಗಳು ಇದೀಗ ಬೆಳಕಿಗೆ ಬಂದಿವೆ. ಕಳೆದ ಗುರುವಾರ (ನ. 2) ನಡೆದ ಯಾತ್ರೆಯ ಉದ್ಘಾಟನಾ ಸಮಾರಂಭ ವಿಫ‌ಲವಾಗಲು ಕಾರಣ ಹುಡುಕಿರುವ ಬಿಜೆಪಿ, ಈ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದವರು ಮತ್ತು ಅವರ ತಂಡದಿಂದ ಉದ್ಘಾಟನಾ ಸಮಾರಂಭದ ಸ್ಥಳದಲ್ಲಿ ಆಗಿರುವ ಲೋಪಗಳು, ವ್ಯವಸ್ಥೆ ಗಳಲ್ಲಿ ಆಗಿರುವ ತಪ್ಪುಗಳೇ ಕಾರಣ ಎಂಬ ನಿರ್ಧಾರಕ್ಕೆ ಬಂದಿದೆ. ನೇರವಾಗಿ ಒಪ್ಪಿಕೊಳ್ಳದಿದ್ದರೂ ವರದಿಯಿಂದ ಬಹಿರಂಗವಾಗಿದೆ. ಗುರುವಾರದ ಸಭೆಯಲ್ಲಿ ಈ ಬಗ್ಗೆ ಜಾವಡೇಕರ್‌ ಅವರಿಗೆ ಪಕ್ಷದ ನಾಯಕರು ವರದಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಶೋಕ್‌ ಜತೆ ಸಮಾಲೋಚನೆ 
ಈ ಮಧ್ಯೆ, ಪರಿವರ್ತನಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದ ಜವಾಬ್ದಾರಿ ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರೊಂದಿಗೆ ಪ್ರಕಾಶ್‌ ಜಾವಡೇಕರ್‌ ಪ್ರತ್ಯೇಕವಾಗಿ ಸಮಾಲೋಚನೆ ನಡೆಸಿದ್ದಾರೆ. ಕಾರ್ಯಕ್ರಮ, ಅದರ ಸಿದ್ಧತೆಗಳು, ಲೋಪಗಳು ಮತ್ತಿತರ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬಂದಿವೆ ಎನ್ನಲಾಗಿದೆ. ಆದರೆ, ಚರ್ಚೆಯ ಮಾಹಿತಿಯನ್ನು ಬಹಿರಂಗಪಡಿಸಲು ಉಭಯ ನಾಯಕರೂ ನಿರಾಕರಿಸಿದ್ದಾರೆ.

ಮಂಗಳೂರಲ್ಲಿಂದು ಬಿಜೆಪಿ ಕೋರ್‌ ಕಮಿಟಿ ಸಭೆ
ಬೆಂಗಳೂರು: ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಗುರುವಾರ ಮಂಗಳೂರಿನಲ್ಲಿ ನಡೆಯಲಿದ್ದು, ಪರಿವರ್ತನಾ ಯಾತ್ರೆ 
ಉದ್ಘಾಟನೆಯ ವೈಫ‌ಲ್ಯಗಳು ಮತ್ತು ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮತ್ತು ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಸಮ್ಮುಖದಲ್ಲಿ ನಡೆಯುವ ಕೋರ್‌ ಕಮಿಟಿ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ, ಕೇಂದ್ರ ಸಚಿವರು, ಉಭಯ ಸದನಗಳ ಪ್ರತಿಪಕ್ಷ ನಾಯಕರು ಸೇರಿದಂತೆ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಪರಿವರ್ತನಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮ ನಿರೀಕ್ಷಿತ ಯಶಸ್ಸು ಕಾಣದೇ ಇರಲು ಕಾರಣವಾದ ಸಂಗತಿಗಳ ಬಗ್ಗೆ ರಾಜ್ಯ ಬಿಜೆಪಿ ಈಗಾಗಲೇ ವರದಿ ಸಿದ್ಧಪಡಿಸಿದ್ದು, ಈ ಕುರಿತು ಸುದೀರ್ಘ‌ ಚರ್ಚೆ ನಡೆಯುವ ಸಾಧ್ಯತೆ ಇದೆ. 

ಅದೇ ರೀತಿ, ವಿಧಾನ ಪರಿಷತ್‌ ನೈರುತ್ಯ ಪದವೀಧರರ ಕ್ಷೇತ್ರ ಪ್ರತಿ ನಿಧಿಸುತ್ತಿರುವ ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ, ಬೆಂಗಳೂರು ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ರಾಮಚಂದ್ರ ಗೌಡ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಮರನಾಥ ಪಾಟೀಲ್‌, ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಪ್ರತಿನಿಧಿಸುತ್ತಿರುವ ನೈರುತ್ಯ ಶಿಕ್ಷಕರ ಕ್ಷೇತ್ರ, ಜೆಡಿಎಸ್‌ ವಶದಲ್ಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅವಧಿ 2018ರ ಜೂ.18ಕ್ಕೆ ಮುಕ್ತಾಯಗೊಳ್ಳುತ್ತದೆ. ಈ ಸ್ಥಾನಗಳಿಗೆ ಬಹುತೇಕ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಲೋಪಗಳೇನು?
ಪ್ರತಿ ಬೂತ್‌ನಿಂದ 3 ಬೈಕ್‌ಗಳಂತೆ ನಡೆದ ಬೈಕ್‌ ರ್ಯಾಲಿಗೆ ನಾಯಕರು ಆಸಕ್ತಿ ತೋರಲಿಲ್ಲ. ಆದರೆ, ಉತ್ತರ ಪ್ರದೇಶದಲ್ಲಿ ಈ ರೀತಿಯ ಬೈಕ್‌ ರ್ಯಾಲಿ ಯಶಸ್ವಿಯಾಗಿದ್ದು, ಅದನ್ನು ಅನುಸರಿಸಲು ಕೇಂದ್ರನಾಯಕರು ಸೂಚಿಸಿದ್ದರು. ಅನಿವಾರ್ಯವಾಗಿ ಒಪ್ಪಿಕೊಂಡ ನಾಯಕರು ಬೈಕ್‌ ರ್ಯಾಲಿಗೆ ಸೂಚಿಸಿದರೇ ಹೊರತು ವ್ಯವಸ್ಥೆ ಮಾಡಲಿಲ್ಲ. 

ಬೆಳಗ್ಗೆ 12 ಗಂಟೆಗೆ ಅಮಿತ್‌ ಶಾ ಬರುತ್ತಾರೆ.  ಬೆಳಗ್ಗೆ 12 ಗಂಟೆಗೆ ಅಮಿತ್‌ ಶಾ ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕಾರ್ಯಕ್ರಮ ಆರಂಭವಾಗುವಾಗಲೇ 12.30 ಆಗಿತ್ತು. ಶಾ ಅವರು ಬಂದಿದ್ದು 1.45ರ ವೇಳೆಗೆ. ಅಷ್ಟರಲ್ಲಿ ದೂರದ ಊರುಗಳಿಂದ ಬಂದಿದ್ದವರು  ಹಸಿದಿದ್ದರು. ಊಟದ ವ್ಯವಸ್ಥೆ ವೇದಿಕೆಯಿಂದ ದೂರದಲ್ಲಿದ್ದುದರಿಂದ ಬಹುತೇಕ ಮಂದಿ ಕಾರ್ಯಕ್ರಮದ ಬದಲು ಊಟ ಸೇವಿ ಸುತ್ತಿದ್ದರು. ವೇದಿಕೆ ಮುಂಭಾಗ ಸೇರಲಿಲ್ಲ. 

ಕಾರ್ಯಕರ್ತರಿಗೆ ಕುರ್ಚಿ ವ್ಯವಸ್ಥೆ ಮಾತ್ರ ಮಾಡಲಾಗಿತ್ತೇ ಹೊರತು ಡ್ರೋಣ್‌ ಕ್ಯಾಮೆರಾ ಮೂಲಕ ಕಾರ್ಯಕ್ರಮದ ಚಿತ್ರೀಕರಣ ಮಾಡಬೇಕು ಎಂಬ ಕಾರಣಕ್ಕೆ ಶಾಮಿಯಾನ ಹಾಕಿರಲಿಲ್ಲ. ಹೀಗಾಗಿ ಕಾರ್ಯಕರ್ತರು ಬಿಸಿಲಿನಲ್ಲಿ ಕಾಯುವಂತಾಯಿತು. ಕೆಲವರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮರದ ಆಶ್ರಯ ಪಡೆದರು.

ಪಕ್ಷದ ಮುಖಂಡರೆಲ್ಲರೂ ಒಟ್ಟಾಗಿ ಒಟ್ಟಾಗಿ ಕೆಲಸ ಮಾಡಲಿಲ್ಲ. ಬಿಬಿಎಂಪಿಯಲ್ಲಿ ಬಿಜೆಪಿಯ 100 ಕಾರ್ಪೋರೇಟರ್‌ ಗಳಿದ್ದರೂ ಅವರು ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಆಸಕ್ತಿ ತೋರಿಸಲಿಲ್ಲ. ಬೆಂಗಳೂರಿನ ಶಾಸಕರೂ ಇದೇ ರೀತಿಯ ನಿರ್ಲಕ್ಷ್ಯ ವಹಿಸಿದ್ದರು.

ಬೆಂಗಳೂರಿನಿಂದ ಹೊರಟ ಯಾತ್ರೆ ಸುತ್ತಮತ್ತಲಿನ (ತುಮಕೂರು, ಹಾಸನ) ಜಿಲ್ಲೆಗಳಲ್ಲೇ ಸುತ್ತಾಡಿದ್ದರಿಂದ ಆ ಭಾಗದ ಕಾರ್ಯಕರ್ತರು ಮಾತ್ರ ಬಂದಿದ್ದು, ತಮ್ಮ ಊರಿನ ಕಾರ್ಯಕ್ರಮದ ಬಗ್ಗೆ ಆಸಕ್ತಿ ವಹಿಸಿದರೇ ಹೊರತು ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲಿಲ್ಲ.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.