ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ ಕಾರ್ಯತಂತ್ರ
Team Udayavani, Nov 12, 2020, 12:07 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ವಿಧಾನಪರಿಷತ್‌ನಲ್ಲಿ ಬಹುಮತ ಕೊರತೆಯಿಂದಾಗಿ ಮಹತ್ವದ ಮಸೂದೆಗಳ ವಿಚಾರದಲ್ಲಿ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಈಗ ಜೆಡಿಎಸ್ ಬೆಂಬಲ ಪಡೆದು ಸಭಾಪತಿ ಹುದ್ದೆ ತನ್ನದಾಗಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ.
ವಿಧಾನಸಭೆಯಲ್ಲಿ ಉಪ ಸಭಾಧ್ಯಕ್ಷರನ್ನು ಕೆಳಕ್ಕಿಳಿಸಿದ ರೀತಿಯಲ್ಲೇ ಇಲ್ಲೂ ಸಭಾಪತಿಯವರನ್ನು ಕೆಳಕ್ಕೆ ಇಳಿಸಲು ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ಪರಿಷತ್‌ನ ನಾಲ್ಕು ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಖ್ಯಾಬಲವನ್ನು 31ಕ್ಕೆ ವೃದ್ಧಿಸಿಕೊಂಡಿರುವ ಬಿಜೆಪಿಗೆ ಜೆಡಿಎಸ್‌ನ ಬೆಂಬಲ ಸಿಕ್ಕರೆ ಸಭಾಪತಿ ಸ್ಥಾನ ಪಡೆಯುವುದು ಸುಲಭ. ಜೆಡಿಎಸ್‌ನಲ್ಲೂ ಬಿಜೆಪಿಗೆ ಬೆಂಬಲ ಕೊಡುವ ಬಗ್ಗೆ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಸಭಾಪತಿ ವಿರುದ್ಧ ಅವಿಶ್ವಾಸ?
ಈಗಿನ ಮಾತುಕತೆ ಪ್ರಕಾರ ಮುಂದಿನ ಚಳಿಗಾಲದ ಅಧಿವೇಶನ ಅಥವಾ ಜನವರಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನ ಸಂದರ್ಭದಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಲಾಗಿದೆ. ಪರಿಷತ್‌ನ ಒಟ್ಟು ಸಂಖ್ಯಾಬಲ 75. ಬಹುಮತಕ್ಕೆ 38 ಸದಸ್ಯರ ಅಗತ್ಯ ಇದೆ. ಬಿಜೆಪಿ 31 ಸದಸ್ಯರನ್ನು ಹೊಂದಿದೆ. ಪಕ್ಷೇತರ ಸದಸ್ಯರೊಬ್ಬರ ಬೆಂಬಲವೂ ಪಡೆದರೆ ಆರು ಮತಗಳ ಕೊರತೆಯಾಗಲಿದೆ. ಕಾಂಗ್ರೆಸ್ 28 ಮತ್ತು ಜೆಡಿಎಸ್ 14 ಸ್ಥಾನಗಳನ್ನು ಹೊಂದಿವೆ.
ಕರಾವಳಿ ಭಾಗಕ್ಕೆ ಸಭಾಪತಿ ಪಟ್ಟ?
ವಿಧಾನಪರಿಷತ್‌ನಲ್ಲಿ ಸಭಾಪತಿ ಹುದ್ದೆ ಬಿಜೆಪಿಗೆ ದೊರೆತರೆ ಕರಾವಳಿ ಭಾಗದವರಿಗೇ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.