ನೈಸ್ ಪ್ರಕರಣ ಮುಂದಿಟ್ಟು ಬಿಜೆಪಿ ರಣತಂತ್ರ
Team Udayavani, Jul 4, 2018, 6:00 AM IST
ಬೆಂಗಳೂರು: ನೈಸ್ ಅಕ್ರಮ ಆರೋಪ ಪ್ರಕರಣ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿ ರಣತಂತ್ರ ರೂಪಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ನೈಸ್ ಅಕ್ರಮ ಸದನದಲ್ಲಿ ಪ್ರಸ್ತಾಪಗೊಂಡಾಗ ಆಗ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ಸಹ ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದರು. ಜತೆಗೆ, ದೇವೇಗೌಡರು ಹಲವಾರು ಬಾರಿ ಈ ಬಗ್ಗೆ ಒತ್ತಾಯಿಸಿದ್ದರು. ಹೀಗಾಗಿ, ಇದೀಗ ನೈಸ್ ಪ್ರಕರಣದ ಬಗ್ಗೆ ಕ್ರಮಕ್ಕೆ ಒತ್ತಾಯಿಸಿ ಉಭಯ ಸದನಗಳಲ್ಲಿ ಹೋರಾಟ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಮೂಲಕ ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರ ರೂಪಿಸಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಅಥವಾ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ನಿಯಮಾವಳಿ ಪ್ರಕಾರವೇ ವಿಷಯ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ನೈಸ್ ಅಕ್ರಮಗಳ ಬಗ್ಗೆ ತನಿಖೆಗೆ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿತ್ತು. ಆದರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಹ ಸದಸ್ಯ ರಾಗಿದ್ದರು. ಬೆಳಗಾವಿ ಅಧಿವೇಶನದಲ್ಲಿ ನೈಸ್ ಅಕ್ರಮಗಳ ಕುರಿತು ವರದಿ ಮಂಡನೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವುದು, ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ಸೇರಿದಂತೆ ಹಲವಾರು ಶಿಫಾರಸು ವರದಿಯಲ್ಲಿದೆ. ಆ ವರದಿ ಪ್ರಕಾರ ಕ್ರಮಕ್ಕೆ ಒತ್ತಾಯಿಸಿ ಪಟ್ಟು ಹಿಡಿಯಲು ಬಿಜೆಪಿ ತೀರ್ಮಾನಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.