ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಇಬ್ಬರ ಅಮಾನತು
Team Udayavani, Oct 27, 2019, 3:06 AM IST
ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ದೊರೆತ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್ ಮಾಸ್ಟರ್ ಹಾಗೂ ಆರ್‌ಪಿಎಫ್ ಎಎಸ್‌ಐ ಅವ ರನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಹೇಳಿದರು.
ಶನಿವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸ್ಟೇಷನ್ ವ್ಯವಸ್ಥಾಪಕ ವರುಣಕುಮಾರ್ ದಾಸ ಹಾಗೂ ಆರ್‌ಪಿಎಫ್ ಎಎಸ್‌ಐ ಮಂಜುನಾಥ ಕಾಮತ್ ಅವರನ್ನು ಅಮಾನತು ಮಾಡಲಾಗಿದೆ. ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚು ಭದ್ರತೆ ಒದಗಿಸಲಾಗುವುದು. ಹೆಚ್ಚು ಸಿಸಿ ಕ್ಯಾಮರಾ ಅಳವಡಿಸಲಾಗುವುದು. ವಿಮಾನ ನಿಲ್ದಾಣದ ಮಾದರಿಯಂತೆ ಹುಬ್ಬಳ್ಳಿ ಸೇರಿ ಅವಶ್ಯವಿರುವ ರೈಲ್ವೆ ನಿಲ್ದಾಣಗಳಲ್ಲಿಯೂ ವಸ್ತುಗಳ ತಪಾಸಣೆಯ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗುವುದು.
ರೈಲ್ವೆ ನಿಲ್ದಾಣದಲ್ಲಿ ಅನಧಿಕೃತ ವೆಂಡರ್ ಹಾಗೂ ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ಮೇಲೆ ಕ್ರಮ ಕೈಗೊಳ್ಳಲು ಅ ಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಎಂದರು.ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲ್ಲ. ಆದರೆ, ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕಾರ್ಪೋರೈಜೇಶನ್ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ವೆಂಡರ್ ಆರೋಗ್ಯ ವಿಚಾರಣೆ: ನಂತರ, ಸ್ಫೋಟದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೆಂಡರ್‌ನನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಘಟನಾ ದಿನದಂದು ನಡೆದ ಮಾಹಿತಿ ಪಡೆದರು.
ಎಫ್ಎಸ್‌ಎಲ್ ವರದಿ ಬಳಿಕ ಸ್ಪಷ್ಟ ಮಾಹಿತಿ
ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್)ದಿಂದ ವರದಿ ಬರಬೇಕಿದೆ. ಅದು ಬಂದ ಮೇಲೆ ಎಲ್ಲ ಮಾಹಿತಿ ದೊರೆಯಲಿದೆ. ಈಗಲೇ ಯಾವುದೇ ವಿಷಯ ಬಹಿರಂಗಪಡಿಸಲ್ಲ. ಅದರಿಂದ ತನಿಖೆಗೆ ತೊಂದರೆಯಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಫೋಟ ಘಟನೆಗೆ ಸಂಬಂಧಿಸಿ ಆಂಧ್ರಪ್ರದೇಶ-ಮಹಾರಾಷ್ಟ್ರ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ಅವರ ಸಹಯೋಗದೊಂದಿಗೆ ತನಿಖೆ ನಡೆಯುತ್ತಿದೆ. ಸ್ಫೋಟಕಗಳ ಮೂಲ ಮತ್ತು ಅದನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎನ್ನುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.