“ಬಾಂಬ್‌ ಪತ್ತೆ: ಅಣಕು ಪ್ರದರ್ಶನದಂತಿದೆ’


Team Udayavani, Jan 22, 2020, 3:06 AM IST

bomb-hdk

ಶೃಂಗೇರಿ: ಮಂಗಳೂರು ವಿಮಾನ ನಿಲ್ದಾಣದ ಬಾಂಬ್‌ ಪತ್ತೆ ಪ್ರಕರಣ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಅಣಕು ಪ್ರದರ್ಶನದಂತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಶ್ರೀ ಶಾರದಾ ಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜ.20ರ ಘಟನೆ ಮಂಗಳೂರಿನಲ್ಲೇ ಏಕೆ ಆಗಬೇಕು? ಇದು ಸಂಶಯ ಉಂಟು ಮಾಡುತ್ತಿದೆ. ಇಡೀ ಘಟನೆ ಗಣರಾಜ್ಯೋತ್ಸವದ ಸಂದರ್ಭ ದಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಅಣಕು ಪ್ರದರ್ಶನದಂತಿದೆ. ಇದರ ಸತ್ಯಾಸತ್ಯತೆ ಯನ್ನು ಜನರೆದುರು ಬಹಿರಂಗಪಡಿಸಬೇಕು ಎಂದರು.

ಬಾಂಬ್‌ ನಿಷ್ಕ್ರಿಯಗೊಳಿಸಲು ಬೆಳಗ್ಗೆಯಿಂದ ಸಂಜೆವರೆಗೂ ಯಾವುದೋ ಕಂಟೈನರ್‌ನಲ್ಲಿ ಹಾಕಿ ಹರ ಸಾಹಸ ಮಾಡಿದ್ದು, ಆಮೇಲೆ ಅದನ್ನು ಸ್ಫೋಟಿಸಿದಾಗ ಅಲ್ಲಿ ಬರೀ ಹೊಗೆ ಕಂಡಿದ್ದು, ಇವೆಲ್ಲ ಅನುಮಾನ ಮೂಡಿಸುತ್ತಿದೆ. ಈ ರೀತಿ ಮಾಡಿ ಜನರನ್ನು ಭಯಭೀತರನ್ನಾಗಿಸಲಾಗಿದೆ. ಇಲ್ಲಿ ಟೈಂ ಬಾಂಬ್‌ ಫಿಕ್ಸ್‌ ಮಾಡಿಲ್ಲ. ಅನಾಹುತ ಮಾಡುವ ಉದ್ದೇಶ ಕಾಣುತ್ತಿಲ್ಲ. ಇದೊಂದು ರೀತಿ ಹುಡುಗಾಟ ಆಡಿದ್ದಾರೋ ಎಂಬ ಭಾವನೆ ಮೂಡಿಸುತ್ತಿದೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ವಾಮಮಾರ್ಗದ ಮೂಲಕ ಅಧಿ ಕಾರಕ್ಕೆ ಬಂದ ಬಿಜೆಪಿ ಸರ್ಕಾರದಿಂದ ನಾಡಿನಲ್ಲಿ ಅಶಾಂತಿಯ ವಾತಾವರಣ ಉಂಟಾಗುತ್ತಿದೆ. ಇಂತಹ ಘಟನೆ ಗಳನ್ನೆಲ್ಲ ಗಮನಿಸಿದಾಗ ವಿಶ್ವ ಹಿಂದೂ ಪರಿಷತ್‌ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ್ಕಾರವೋ ಎಂಬಂತಾ ಗಿದ್ದು, ಎಲ್ಲಿಂದಲೋ ಸೂಚನೆ ಬರುತ್ತಿದೆ ಎಂಬ ಅನುಮಾನ ಇದೆ ಎಂದರು.

ನಾನು ಮುಖ್ಯಮಂತ್ರಿಯಾಗಿದ್ದ 14 ತಿಂಗಳ ಅವಧಿಯಲ್ಲಿ ಯಾವ ಜಿಹಾದ್‌, ಯಾವ ಉಗ್ರಗಾಮಿಯನ್ನೂ ನೋಡಲಿಲ್ಲ. ಯಾವುದೋ ಲಾಭಕ್ಕಾಗಿ ಸರ್ಕಾರ ಪೊಲೀಸ್‌ ಇಲಾಖೆಯನ್ನು ಬಳಸಿಕೊಂಡು ನಾಟಕವಾಡುತ್ತಿದೆ. ಮಂಗಳೂರು ಕಮಿಷನರ್‌ ಹರ್ಷ ಇಂದು ಎಲ್ಲಿಯಾದರೂ ಬಾಂಬ್‌ ಹಾಕಿದ್ದಾರಾ ಎಂದು ವ್ಯಂಗ್ಯವಾಡಿದರು.

ಹಿಂದೂಗಳಲ್ಲಿ ಯಾರೂ ಟೆರರಿಸ್ಟ್‌ ಇಲ್ಲ. ಹಿಂದೂ ಟೆರರಿಸಂ ಅನ್ನುವ ಪದವನ್ನೇ ನಾನು ಕೇಳಿಲ್ಲ. ಟೆರರಿಸ್ಟ್‌ ಅಂದರೆ ಪಾಕಿಸ್ತಾನ ದಿಂದ ಬಂದವರು ಅಂತಾ ಅಂದುಕೊಂಡಿದ್ದೇನೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು. ತನಿಖಾ ಹಂತದಲ್ಲಿ ಒಂದೊಂದು ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.
-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಪ್ರಕರಣ ಭಯ ಹುಟ್ಟಿಸುವ ಘಟನೆಯಾಗಿದೆ. ಇದರಲ್ಲಿ ರಾಜ್ಯದ ಗುಪ್ತಚರ ಇಲಾಖೆಯ ವೈಫ‌ಲ್ಯ ಎದ್ದು ಕಾಣುತ್ತದೆ. ಪ್ರಕರಣದ ಹಿಂದೆ ಯಾರಿದ್ದಾರೆ?, ಯಾರ ಕೈವಾಡ ಇದೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು.
-ಸಿದ್ದರಾಮಯ್ಯ, ಮಾಜಿ ಸಿಎಂ

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.