ಬಾಂಬ್ ಸ್ಕ್ವಾಡ್ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ
Team Udayavani, Jan 23, 2020, 3:04 AM IST
ಬೆಳಗಾವಿ: ಮಂಗಳೂರು ಬಾಂಬ್ ಪತ್ತೆ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಅಗತ್ಯ ಭದ್ರತೆ ಮತ್ತು ಬಾಂಬ್ ಸ್ಕ್ವಾಡ್ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಂಬ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿ ಆದಿತ್ಯರಾವ್, ಮಾನಸಿಕ ಅಸ್ವಸ್ಥನಿದ್ದು, ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೂಡ ಹುಸಿ ಬಾಂಬ್ ಕರೆ ಮಾಡಿದ್ದ. ಎರಡು ಪ್ರಕರಣಗಳಲ್ಲಿ ಈತನಿಗೆ ಶಿಕ್ಷೆ ಆಗಿದೆ. ಕೆಲಸ ಸಿಕ್ಕಿಲ್ಲ ಎನ್ನುವ ಖನ್ನತೆಯಿಂದ ಇಂಥ ಕೃತ್ಯ ಎಸಗಿದ್ದಾನೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.
ಮಂಗಳೂರು ಪೊಲೀಸರು ಮೂರು ತಂಡ ರಚಿಸಿ ಆರೋ ಪಿಯ ಪತ್ತೆ ಹಚ್ಚಿದ್ದು, ಶೀಘ್ರವೇ ಈತನನ್ನು ಮಂಗಳೂರು ಪೊಲೀಸರ ವಶಕ್ಕೆ ನೀಡಲಾಗುವುದು. ಘಟನಾ ಸ್ಥಳದಲ್ಲಿ ದೊರೆತ ವಸ್ತುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಎಲ್ಲ ಮಾಹಿತಿ ತಿಳಿದು ಬರಲಿದೆ. ಎನ್‌ಎಸ್‌ಜಿ ಎಲ್ಲ ವಿವರಗಳನ್ನು ಮಂಗಳೂರಿನಲ್ಲಿ ಪಡೆದುಕೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.