![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 9, 2022, 11:00 PM IST
ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಇಂಡಿಗೋ ವಿಮಾನದಲ್ಲಿ ಶೌಚಾಲಯದಲ್ಲಿದ್ದ ಟಿಶ್ಯೂ ಪೇಪರ್ ಮೇಲೆ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆಂತಕದ ವಾತಾವರಣ ನಿರ್ಮಾಣವಾಗಿತ್ತು.
ರವಿವಾರ ರಾತ್ರಿ 9.26ಕ್ಕೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿಮಾನದಲ್ಲಿ ಬೆದರಿಕೆ ಸಂದೇಶ ಕಂಡು ವಿಮಾನದ ಸಿಬಂದಿ ಕೂಡಲೇ ಪೈಲೆಟ್ ಗಮನಕ್ಕೆ ತಂದಿದ್ದು, ಪೈಲೆಟ್ ಸಹಾಯವಾಣಿ ಮೂಲಕ ದೂರು ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಸಿಐಎಸ್‌ಎಫ್ ಸಿಬಂದಿ ವಿಮಾನ ಸಂಪೂರ್ಣವಾಗಿ ತಪಾಸಣೆ ನಡೆಸಿದ್ದಾರೆ. ಬಳಿಕ ಸುಳ್ಳು ಸಂದೇಶ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ 175 ಪ್ರಯಾಣಿಕರನ್ನು ಹೊತ್ತ ತಂದಿದ್ದ ಇಂಡಿಗೋ ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್ ಬಿದ್ದಿದ್ದನ್ನು ಕ್ಯಾಬಿನ್ ಸಿಬಂದಿ ಗಮನಿಸಿದ್ದಾರೆ. ಅದರಲ್ಲಿ ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್ ಮೆ ಬಾಂಬ್ ಹೈ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಹಿಂದಿಯಲ್ಲಿ ಉಲ್ಲೇಖಿಸಲಾಗಿತ್ತು. ಅಷ್ಟರಲ್ಲಿ ವಿಮಾನ ಲ್ಯಾಂಡ್ ಮಾಡಲಾಗಿತ್ತು. ಪ್ರಯಾಣಿಕರೇ ಕೃತ್ಯವೆಸಗಿದ್ದು, ಶಂಕಿತ ಪ್ರಯಾಣಿಕರ ಕೈಬರಹದ ತಪಾಸಣೆ, ತನಿಖೆ ಮುದುವರಿದಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.