75 ದಿನಗಳಲ್ಲಿ 4.5 ಕೋಟಿ ಜನರಿಗೆ ಬೂಸ್ಟರ್ ಡೋಸ್ ಗುರಿ: ಡಾ.ಕೆ.ಸುಧಾಕರ್
ಸದ್ಯದಲ್ಲೇ ನಮ್ಮ ಕ್ಲಿನಿಕ್ ಆರಂಭ
Team Udayavani, Jul 16, 2022, 8:00 PM IST
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100 ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಕೂಡ ಮುಂದಿನ 75 ದಿನಗಳಲ್ಲಿ ನೀಡಲಿದೆ ಎಂದು ಹೇಳಿದರು.
ರಾಜ್ಯದ ವಿವಿಧೆಡೆ ಏಳೂವರೆ ಸಾವಿರ ಸರ್ಕಾರಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದು ಕೋರಿದರು.
ಇತ್ತೀಚೆಗೆ ಅನೇಕರಿಗೆ ಕೋವಿಡ್ ಬಂದರೆ ಏನಾಗುತ್ತೆ ಅನ್ನುವ ಉದಾಸೀನತೆ ಇದೆ. 2 ಡೋಸ್ ಲಸಿಕೆ ತೆಗೆದುಕೊಂಡು 6 ತಿಂಗಳುಗಳ ಮೇಲಾಗಿದೆ. ಇನ್ನೂ ಕೆಲವರು 2ನೇ ಡೋಸ್ ತೆಗೆದುಕೊಂಡು 1 ವರ್ಷದ ಮೇಲಾಗಿದೆ.
ಇಂತಹವರಿಗೆ ಅಪಾಯ ಇರುತ್ತದೆ. ಹೀಗಾಗಿ ಲಸಿಕಾಕರಣವನ್ನು ಗಂಭಿರವಾಗಿ ತೆಗೆದುಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಇಲ್ಲಿಯ ತನಕ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಲು ಲಸಿಕಾಕರಣದ ವೇಗವೇ ಕಾರಣವಾಗಿದೆ. ಹೀಗಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್‌ಗಳು ಆರಂಭವಾಗಲಿವೆ.
ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದ್ದು ಜುಲೈ 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಮೊದಲ ಕ್ಲಿನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಜತೆ ಜಾಗೃತಿಯೂ ಅವಶ್ಯಕ: ಡಾ.ಕೆ.ಸುಧಾಕರ್
ಎಚ್ಚರಿಕೆ
ಮಂಕಿಫಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರವಹಿಸಲಾಗಿದೆ . ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮುನ್ನೇಚ್ಚರಿಕೆ ಮಾರ್ಗಸೂಚಿ ಹೊರಡಿಸಲಾಗಿತ್ತು. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೇರಳದಲ್ಲಿ ಮೊನ್ನೆ ಒಂದು ಪ್ರಕರಣ ವರದಿಯಾಗಿದೆ. ಆ ನಂತರ ಗಡಿ ಭಾಗದಲ್ಲಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಹೀಗಾಗಿ ಮಂಕಿಫಾಕ್ಸ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಮೊಟ್ಟೆ ಅಪೌಷ್ಟಿಕ ಎಂದು ವರದಿ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವೈಯಕ್ತಿಕವಾಗಿ ತಿಳಿದುಕೊಂಡಿರುವಂತೆ ಹಾಲು, ಮೊಟ್ಟೆ ಎಲ್ಲವೂ ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.