ಉಭಯ ಸದನ: ಕ್ರೈಂ ರೇಟ್‌ ಗದ್ದಲ


Team Udayavani, Feb 7, 2018, 7:20 AM IST

06-22.jpg

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ ಐದು ವರ್ಷಗಳಲ್ಲಿ ನಡೆದಿರುವ ಹಿಂದೂಪರ ಕಾರ್ಯಕರ್ತರ ಹತ್ಯೆ ಹಾಗೂ ಕಾನೂನು ಸುವ್ಯವಸ್ಥೆ ವೈಫ‌ಲ್ಯಕ್ಕೆ ಸಂಬಂಧಿಸಿದಂತೆ ಉಭಯ ಸದನಗಳಲ್ಲಿ  ಮಂಗಳವಾರ ವಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್‌ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿ ಕೋಲಾಹಲ ಸೃಷ್ಟಿಯಾಗಿತ್ತು. ಅಂತಿಮವಾಗಿ ಸರಕಾರದ ಉತ್ತರದಿಂದ ಅಸಮಾ ಧಾನಗೊಂಡ ಬಿಜೆಪಿ ವಿಧಾನಸಭೆಯಲ್ಲಿ ಧರಣಿ ನಡೆಸಿದ್ದರಿಂದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಹಾಗೂ ಪರಿಷತ್‌ನಲ್ಲಿ  ಕೆ.ಎಸ್‌. ಈಶ್ವರಪ್ಪ ನಿಲುವಳಿ ಸೂಚನೆಯಡಿ ವಿಷಯ ಪ್ರಸ್ತಾವಿಸಿದರಾದರೂ ಅನಂತರದಲ್ಲಿ ವಿಧಾನಸಭೆಯಲ್ಲಿ ನಿಯಮ 69 ಮತ್ತು ವಿಧಾನ ಪರಿಷತ್ತಿನಲ್ಲಿ ನಿಯಮ 68ರಡಿ ಚರ್ಚೆಗೆ ಅವಕಾಶ ನೀಡಲಾಯಿತು. ರಾಜಕೀಯ ಕಾರಣ ಕ್ಕಾಗಿ ಹಿಂದೂಪರ ಕಾರ್ಯಕರ್ತರ ಹತ್ಯೆ ಯಾಗುತ್ತಿದ್ದು ಸರಕಾರ ಕೊಲೆಗಡುಕರ ರಕ್ಷಣೆಗೆ ನಿಂತಿದೆ ಎಂದು ಜಗದೀಶ್‌ ಶೆಟ್ಟರ್‌ ಮತ್ತು ಈಶ್ವರಪ್ಪ ಆರೋಪಿಸಿದರು.

ಎರಡೂ ಸದನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರು, ಬಿಜೆಪಿ ಸರಕಾರದ ಅವಧಿಯಲ್ಲೇ ಹೆಚ್ಚು ಹತ್ಯೆಗಳು ನಡೆದಿವೆ. ಸತ್ತವರನ್ನೆಲ್ಲ ಬಿಜೆಪಿಯವರು ನಮ್ಮವರು ಎನ್ನುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ನರಮೇಧ ನಡೆದಿರಲಿಲ್ಲವೇ ಎಂದು ವಿಪಕ್ಷ ಸದಸ್ಯರ ಮೇಲೆ ಮುಗಿಬಿದ್ದರು. ಈ ಸಂದರ್ಭ ಕಾಂಗ್ರೆಸ್‌ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ, ಆರೋಪ – ಪ್ರತ್ಯಾರೋಪದಿಂದ ಗದ್ದಲ – ಕೋಲಾಹಲವುಂಟಾಗಿ ಎರಡೂ ಸದನಗಳು ಮುಂದೂಡಿದ ಘಟನೆಯೂ ನಡೆಯಿತು.ಬೆಂಗಳೂರು ರೇಪ್‌ ಸಿಟಿ: ಪ್ರಶ್ನೋತ್ತರ ಮುಗಿಯುತ್ತಿದ್ದಂತೆ ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌, ಕಾಂಗ್ರೆಸ್‌ ಸರಕಾರ ಬಂದ ಮೇಲೆ ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗಿವೆ. ಬೆಂಗಳೂರು ಮರ್ಡರ್‌ ಸಿಟಿ, ರೇಪ್‌ ಸಿಟಿಯಾಗಿದೆ. ಮೊನ್ನೆ ನರೇಂದ್ರ ಮೋದಿ ಹೇಳಿರುವುದು ಸರಿಯಾಗಿಯೇ ಇದೆ ಎಂದರು.
ಇದರಿಂದ ಕುಪಿತರಾದ ಗೃಹ ಸಚಿವ ರಾಮಲಿಂಗಾ ರೆಡ್ಡಿ,  ಗುಜರಾತ್‌ನಲ್ಲಿ ನರೇಂದ್ರಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ನರಮೇಧ ನಡೆದಿರಲಿಲ್ಲವೇ ಎಂದು ತಿರುಗೇಟು ನೀಡಿದರು.

ಇದು ಬಿಜೆಪಿ ಸದಸ್ಯರನ್ನು ಕೆರಳಿಸಿತಲ್ಲದೆ, ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಸಿ.ಟಿ.ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಅಪ್ಪಚ್ಚು ರಂಜನ್‌, ಜೀವರಾಜ್‌, ಬಸವರಾಜ ಬೊಮ್ಮಾಯಿ ಸಚಿವರ ಮೇಲೆ ಮುಗಿಬಿದ್ದರು. ಈ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿ ನೆರವಿಗೆ ಬಂದ ಸಚಿವ ಕೆ.ಜೆ. ಜಾರ್ಜ್‌, ಬಿಜೆಪಿಯವರು ಸತ್ತವರನ್ನೆಲ್ಲಾ ನಮ್ಮವರೇ ಅಂತಾರೆ. ನಾವು ಡೆಡ್‌ ಬಾಡಿ ರಾಜಕಾರಣ ಮಾಡಲ್ಲ. ನಿಮ್ಮ ಅವಧಿಯಲ್ಲಿ ಕೊಲೆಗಳೇ ಆಗಿಲ್ಲವೇ ಎಂದು ಪ್ರಶ್ನಿಸಿದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಗೃಹ ಸಚಿವರು ನೀವೋ ರಾಮಲಿಂಗಾರೆಡ್ಡಿಯವರೋ …ನೀವೇಕೆ ಉದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದೀರಿ ಎಂದು ದಬಾಯಿಸಿದರು. ಆಗ ಜಾರ್ಜ್‌ ನೆರವಿಗೆ ಬಂದ ಎಂ.ಬಿ.ಪಾಟೀಲ್‌, ಬಿಜೆಪಿಯವರು ಕೊಲೆಗಳ ಕೃತ್ಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ? ಮೋದಿಯವರು ಬಂದು ಹೋದ ಮೇಲೆ ಹೆಚ್ಚು ಮಾತನಾಡುತ್ತಿದ್ದೀರಿ ಎಂದು ಆರೋಪಿಸಿದರು.

ಒಂದು ಹಂತದಲ್ಲಿ ಬಿಜೆಪಿಯ ಅರವಿಂದ ಲಿಂಬಾವಳಿ ಮತ್ತು ಸಚಿವ ಎಂ.ಬಿ.ಪಾಟೀಲ್‌ ಮಧ್ಯೆ ಮಾತಿನ ಚಕಮಕಿ ವೈಯಕ್ತಿಕಕ್ಕಿಳಿದು ಅರವಿಂದ ಲಿಂಬಾವಳಿ ಅವರು ತೋಳು ತಟ್ಟಿ ಆಯ್ತು ನೋಡೋಣ ಬಿಡಿ ಎಂದು ಎಂ.ಬಿ.ಪಾಟೀಲ್‌ ಅವರನ್ನು ದುರಗುಟ್ಟಿ ನೋಡಿದರು. ಸದನದಲ್ಲಿ ಆಡಳಿತ ಮತ್ತು ವಿಪಕ್ಷದವರ ನಡುವೆ ಚಕಮಕಿ ಹೆಚ್ಚಾಗಿ ಗದ್ದಲ ಉಂಟಾದಾಗ ಸ್ಪೀಕರ್‌ ಸ್ಥಾನದಲ್ಲಿದ್ದ ಉಪಸಭಾಧ್ಯಕ್ಷ ಶಿವಶಂಕರರೆಡ್ಡಿ, ಇಬ್ಬರನ್ನೂ ಸಮಾಧಾನಪಡಿಸಿ ಕುಳ್ಳಿರಿಸಿದರು. ಅನಂತರವೂ ವಾಕ್ಸಮರ ಮುಂದುವರಿದಿದ್ದರಿಂದ ಕಲಾಪವನ್ನು ಭೋಜನಾನಂತರಕ್ಕೆ ಮುಂದೂಡಲಾಯಿತು.

ಭೋಜನಾನಂತರ ಮಾತು ಮುಂದುವರಿಸಿದ ಜಗದೀಶ್‌ ಶೆಟ್ಟರ್‌ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸ ಮುಂದುವರಿಸಿದರು. ಜಗದೀಶ್‌ ಶೆಟ್ಟರ್‌, ಆರ್‌.ಅಶೋಕ್‌, ಸಿಟಿ.ರವಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಡಿ.ಎನ್‌.ಜೀವರಾಜ್‌ ಹಾಗೂ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌ ಮಧ್ಯೆ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪ ಮುಂದುವರಿಯಿತು.

ಚರ್ಚೆಗೆ ಉತ್ತರಿಸಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಸರಕಾರವನ್ನು ಸಮರ್ಥಿಸಿ ಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧಾವಿಸಿ ಧರಣಿ ಆರಂಭಿಸಿದರಲ್ಲದೆ ಸರಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನವರು ಬಿಜೆಪಿ ವಿರುದ್ಧ ಘೋಷಣೆ ಕೂಗಲಾರಂಭಿಸಿದ್ದರಿಂದ ಗದ್ದಲ ಹೆಚ್ಚಾಗಿ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

ಕೊಲೆಗಡುಕರ ಸ್ವರ್ಗ: ಮೇಲ್ಮನೆಯಲ್ಲಿ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ವಿಷಯ ಪ್ರಸ್ತಾವಿಸಿ, ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಅತ್ಯಾಚಾರಿಗಳು ಮತ್ತು ಕೊಲೆಗಡುಕರಿಗೆ ಕರ್ನಾಟಕ ಸ್ವರ್ಗವಾಗಿದೆ. ಆರೋಪಿಗಳನ್ನು ಬಂಧಿಸುವ ಬದಲು ಪೊಲೀಸ್‌ ಠಾಣೆಗಳಲ್ಲಿ ಬಿರಿಯಾನಿ ಕೊಟ್ಟು ಕಳುಹಿಸುವ ಈ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ವಿರುದ್ಧ ವಾಗ್ಧಾಳಿ ನಡೆಸಿದರು.

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫ‌ಲವಾಗಿದೆ. 6 ವರ್ಷದ ಕಂದಮ್ಮನಿಂದ ಹಿಡಿದು 60 ವರ್ಷ ವೃದ್ಧೆಯ ಮೇಲೂ ಅತ್ಯಾಚಾರ ನಡೆಯುತ್ತಿದೆ. ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಪ್ರಶಾಂತ ಪೂಜಾರಿಯಿಂದ ಹಿಡಿದು ಸಂತೋಷ್‌ವರೆಗೆ ಇಲ್ಲಿತನಕ ಸಂಘಪರಿವಾರದ 23 ಕಾರ್ಯಕರ್ತರ ಹತ್ಯೆಯಾಗಿದೆ. ನಮ್ಮ ಒತ್ತಾಯ, ಪ್ರತಿಭಟನೆಗೆ ಮಣಿದು ಕೆಲವರನ್ನು ಸರಕಾರ ಬಂಧಿಸುತ್ತದೆ. ಆದರೆ, ಮುಂದೆ ಕ್ರಮ ಆಗುವುದಿಲ್ಲ. ಆರೋಪಿಗಳನ್ನು ಪೊಲೀಸ್‌ ಠಾಣೆಗೆ ಕರೆದು ಬಿರಿಯಾನಿ ತಿನ್ನಿಸಿ ಕಳಿಸುವ ವ್ಯವಸ್ಥೆ ಈ ಸರಕಾರದಲ್ಲಿದೆ ಎಂದು ಆರೋಪಿಸಿದರು.

ಉಗ್ರಪ್ಪ ವರದಿ ಎಲ್ಲಿ: ಉಗ್ರಪ್ಪ ಅವರು ಅಧ್ಯಕ್ಷತೆಯ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆ ಸಮಿತಿ 2015ರಲ್ಲಿ ಡಿಸೆಂಬರ್‌ನಲ್ಲಿ ವರದಿ ಕೊಟ್ಟಿದೆ. ಇಡೀ ರಾಜ್ಯ ಸುತ್ತಾಡಿ, ಹೆಣ್ಣುಮಕ್ಕಳ ಅಳಲನ್ನು ಕೇಳಿರುವ ಉಗ್ರಪ್ಪನವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ಸರಕಾರ ಆ ವರದಿಗೆ ಸ್ಪಂದಿಸಿಲ್ಲ. ಅತ್ಯಾಚಾರಗಳು ಎಷ್ಟು ನಡೆದವು ಎಂದು ತೋರಿಸಲಿಕ್ಕೆ ವರದಿ ಸಿದ್ದಪಡಿಸಿದಂತಿದೆ ಎಂದರು. ಕಾನೂನು-ಸುವ್ಯವಸ್ಥೆಗೆ ನಮ್ಮ ಸರಕಾರ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ. 2008ರಿಂದ 13 ಹಾಗೂ 2013ರಿಂದ ಇಲ್ಲಿವರೆಗಿನ ಅಪರಾಧ ಪ್ರಕರಣಗಳನ್ನು ಅವಲೋಕಿಸಿದರೆ ಅಪರಾಧ ಪ್ರಕರಣಗಳಲ್ಲಿ ಶೇ.2ರಷ್ಟು ಇಳಿಕೆಯಾಗಿದೆ ಎಂದು ಸಭಾನಾಯಕ ಎಂ.ಆರ್‌. ಸೀತಾರಾಂ ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಇತ್ತೀಚೆಗೆ  ಕೊಲೆ ಪ್ರಕರಣಗಳು ನಡೆದಾಗ ಅಪರಾಧಿಗಳು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುವ ಬದಲು ಮುಖ್ಯ ಮಂತ್ರಿ ಹಾಗೂ ಗೃಹ ಸಚಿವರು, ಹತ್ಯೆಯಾದವರು ಬಿಜೆಪಿ ಕಾರ್ಯಕರ್ತರಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ವಿ.ಎಸ್‌. ಉಗ್ರಪ್ಪ ಮಾತನಾಡಿ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಪುರಾಣ ಕಾಲದಿಂದಲೂ ನಡೆಯುತ್ತಿವೆ. ಅಂಕಿ ಅಂಶಗಳ ಮೇಲೆ ಆರೋಪ ಮಾಡುವುದರಿಂದ ತಡೆಯಲು ಸಾಧ್ಯವಿಲ್ಲ. ತಾವು ನೀಡಿರುವ ವರದಿ ಬಗ್ಗೆ ಸರಕಾರ ಕ್ರಮ ಕೈಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಅಲ್ಲದೇ ನಿರ್ಭಯಾ ನಿಧಿಯನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.

ಕಾರಜೋಳ ಸಿಡಿಮಿಡಿ: ಅಪರಾಧ ಕೃತ್ಯಗಳ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಜಿಲ್ಲೆ ಹಾಗೂ ಕ್ಷೇತ್ರದ ಬಗ್ಗೆ ಹೇಳಲು ಬಿಜೆಪಿಯ ಗೋವಿಂದ ಕಾರಜೋಳ ಎದ್ದು ನಿಂತರು. ಆದರೆ, ಜಾರ್ಜ್‌ ಅವರು ಮಾತನಾಡುತ್ತಲೇ ಇದ್ದರು. ಇದಕ್ಕೆ ಸಿಡಿಮಿಡಿಗೊಂಡ ಕಾರಜೋಳ, ನಾವೇನು ಇಲ್ಲಿ ಗೋಲಿ ಆಡಲು ಬರುತ್ತೇವಾ, ಕೂಡ್ರಿ … ಕೂಡ್ರಿ ಎಂದರು. ಅದಕ್ಕೆ ಜಾರ್ಜ್‌, ನನ್ನನ್ನು ಕೂಡ್ರಿ ಅಂತ ಹೇಳಲು ನೀವ್ಯಾರು ಎಂದರು. ಆಗ ಬಿಜೆಪಿ-ಕಾಂಗ್ರೆಸ್‌ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಕೋಲಾಹಲ ವಾತಾವರಣ  ಉಂಟಾದಾಗ ಸದನ ಮುಂದೂಡಲಾಯಿತು.
ಪೊಲೀಸ್‌ ರಾಜ್ಯ: ಮೈಸೂರಿನಲ್ಲಿ ಪೊಲೀಸ್‌ ರಾಜ್ಯ ಇದೆ. ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಗ್ರಾಮ ಪಂಚಾಯತ್‌ ಸದಸ್ಯರು, ರಾಜಕೀಯ ಮುಖಂಡರನ್ನು ಖುದ್ದು ಸಿದ್ದರಾಮಯ್ಯ ಕರೆದು ಕೇಸ್‌ ವಾಪಸ್‌ ಪಡೆಯುತ್ತೇನೆ. ನಮ್ಮ ಪರ ಕೆಲಸ ಮಾಡಿ ಎಂದು  ಆಮಿಷವೊಡ್ಡುತ್ತಿದ್ದಾರೆ. ಕೆಂಪಯ್ಯ ಅವರು ಅಂತಹ ಪ್ರಕರಣಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಜೆಡಿಎಸ್‌ನ ಜಿ.ಟಿ. ದೇವೇಗೌಡ ಆರೋಪಿಸಿದರು.

ಬಿಜೆಪಿ ಅವಧಿಯಲ್ಲೇ  ಹೆಚ್ಚು ಅಪರಾಧ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೊಲೆ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳು ಹೆಚ್ಚಾಗಿವೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಅಂಕಿ-ಸಂಕಿಗಳ ಸಹಿತ ತಿರುಗೇಟು ನೀಡಿದ್ದು, ಕಾಂಗ್ರೆಸ್‌ ಸರಕಾರದ ಅವಧಿ ಗಿಂತ ಬಿಜೆಪಿ ಸರಕಾರದ ಅವಧಿಯಲ್ಲೇ ಹೆಚ್ಚು ಅಪರಾಧ ಪ್ರಕರಣ ಗಳು ವರದಿಯಾಗಿವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ ಮತ್ತು ಹಿಂದೂ ಕಾರ್ಯಕರ್ತರ ಕೊಲೆ ಕುರಿತಂತೆ ನಿಯಮ 69ರಡಿ ನಡೆದ ಚರ್ಚೆಗೆ ಉತ್ತರ ನೀಡಿದ ಸಚಿವರು, ಬಿಜೆಪಿ ಸರಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಶೇ. 6ರಷ್ಟಿದ್ದರೆ, ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಮೇಲೆ 2017ರ ಅಂತ್ಯಕ್ಕೆ ಶೇ. 5ಕ್ಕೆ ಇಳಿದಿದೆ. ಹೀಗಿರುವಾಗ ಕಾನೂನು ಸುವ್ಯವಸ್ಥೆ ಬಿಜೆಪಿ ಸರಕಾರದ ಅವಧಿಯಲ್ಲಿ ಚೆನ್ನಾಗಿತ್ತೇ ಅಥವಾ ಈಗಿನ ಸರಕಾರದಲ್ಲಿ  ಚೆನ್ನಾಗಿದೆಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.