BPL Card: ಸರಕಾರಿ ನೌಕರರು, ಐಟಿ ಪಾವತಿದಾರರ ಕಾರ್ಡ್ ಮಾತ್ರ ರದ್ದು: ಸಿಎಂ ಕಟ್ಟಪ್ಪಣೆ
ಬಡವರ ಪಡಿತರ ಚೀಟಿ ರದ್ದಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಸಿದ್ದರಾಮಯ್ಯ
Team Udayavani, Nov 21, 2024, 7:40 AM IST
ಬೆಂಗಳೂರು: ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರ ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತತ್ಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರಗಿ ಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಿವಿಧೆಡೆ ಅರ್ಹರಿಗೂ ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ಬಗ್ಗೆ ವ್ಯಾಪಕ ದೂರುಗಳ ಜತೆಗೆ ಬಿಜೆಪಿ ಇದೇ ವಿಷಯವನ್ನು ಕೈಗೆತ್ತಿಕೊಂಡು ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ.
ಶಾಸಕರಿಗೆ ಪಟ್ಟಿ ರವಾನೆ
ಆಯಾ ಕ್ಷೇತ್ರಗಳ ಶಾಸಕರಿಗೆ ರದ್ದಾದ ಬಿಪಿಎಲ್ ಕಾರ್ಡ್ಗಳ ಪಟ್ಟಿ ರವಾನಿಸುತ್ತೇವೆ. ಅವರು ಸ್ಥಳೀಯವಾಗಿ ತಂಡ ರಚಿಸಿ, ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindi ಹೇರಿದರೆ ಗೋಕಾಕ್ ಮಾದರಿ ಹೋರಾಟ: ಸಾ.ರಾ.ಗೋವಿಂದು
Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?
Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ
C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್.ಅಶೋಕ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.