ಬಿಜೆಪಿ ಆರೋಪದ ಬೆನ್ನಲ್ಲೇ ಆನ್ಲೈನ್ ಮದ್ಯ ಮಾರಾಟಕ್ಕೆ ಸಿಎಂ ಬ್ರೇಕ್
Team Udayavani, Nov 2, 2018, 3:40 PM IST
ಬೆಂಗಳೂರು: ಆನ್ಲೈನ್ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಧಿಕಾರ ಸ್ವೀಕರಿಸುವ ಮುಂಚೆ, ಹಿಂದಿನ ಸರ್ಕಾರ ಆನ್ಲೈನ್ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಈ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ. ಹಿಂದೆ ಅನುಮತಿ ಕೊಟ್ಟಿರುವ ಫೈಲ್ ಹಿಡಿದು ಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಾನು ಯಾವುದೇ ವ್ಯಕ್ತಿಗಳಿಗೆ ಹಣ ಸಂಪಾದನೆಗೆ ಅವಕಾಶ ಮಾಡಿ ಕೊಡುವುದಿಲ್ಲ , ತೆರಿಗೆ ಸೋರಿಕೆಗೆ ಅವಕಾಶ ನೀಡುವುದಿಲ್ಲ ಎಂದರು.
ಶಿವಮೊಗ್ಗದಲ್ಲಿ ಭರ್ಜರಿ ಮದ್ಯ ಮಾರಾಟ
ಶಿರಾಳಕೊಪ್ಪದಲ್ಲಿ ಮುಖ್ಯಮಂತ್ರಿ ಎಚ್ಡಿಕೆ ಅವರು ಪ್ರಚಾರ ಸಭೆ ನಡೆಸಿದ ದಿನ ಬರೋಬ್ಬರಿ 1500 ಲೀಟರ್ ಮದ್ಯ ಮಾರಾಟವಾಗಿದೆ ಎಂದು ಜಿಲ್ಲಾಧಿಕಾರಿಗೆ ಬಿಜೆಪಿ ದೂರು ನೀಡಿತ್ತು. ದೂರನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಮದ್ಯದ ಅಂಗಡಿಗೆ ನೊಟೀಸ್ ನೀಡಿದ್ದಾರೆ.
ಬಿಜೆಪಿಗೆ ಭಯ !
ನಾನು ಪ್ರಚಾರಕ್ಕೆ ಹೋಗಿ ಬಂದ ಬಳಿಕ ಬಿಜೆಪಿಯವರು ಗಾಬರಿಗೊಂಡಿದ್ದಾರೆ. ಪಕ್ಷದ ಬಿಜೆಪಿ ನಾಯಕರೆಲ್ಲ ಸೇರಿ ಹೆಚ್ಚಿನ ರೀತಿ ಮದ್ಯದ ಮೂಲಕ ಮತದಾರರಿಗೆ ಆಮಿಷ ನೀಡಲು ಮುಂದಾಗಿದ್ದಾರೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.