N. Chaluvaraya Swamy ವಿರುದ್ಧ ಲಂಚದ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
Team Udayavani, Aug 8, 2023, 2:35 PM IST
ಬೆಂಗಳೂರು: ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವ ಚಲುವರಾಯ ಸ್ವಾಮಿ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗೃಹ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ.
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಕೃಷಿ ಅಧಿಕಾರಿಗಳು ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಲಂಚ ಪದ್ಧತಿಗೆ ಕಡಿವಾಣ ಹಾಕದಿದ್ದರೆ, ಕುಟುಂಬ ಸಮೇತ ವಿಷಕುಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೂ ಸೂಚನೆ ನೀಡಿರುವ ರಾಜ್ಯಪಾಲರು, ಈ ಕುರಿತು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇಂದು ಬೆಳಗ್ಗೆ ನಿಜಲಿಂಗಪ್ಪ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದರು.
ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದಿದ್ದರು. ಇದೀಗ ಸಿಐಡಿ ತನಿಖೆಗೆ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.