ಬಿಆರ್ ಎಸ್-ಜೆಡಿಎಸ್ ಮೈತ್ರಿ; ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ: ಹೆಚ್ ಡಿಕೆ
ಬಿಜೆಪಿ-ಕಾಂಗ್ರೆಸ್ ಮುಕ್ತ್ ರಾಜಕೀಯ ವಾತಾವರಣವಿದೆ...
Team Udayavani, Oct 5, 2022, 7:28 PM IST
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನೇತೃತ್ವದ ʼಭಾರತ್ ರಾಷ್ಟ್ರ ಸಮಿತಿʼ (ಬಿಆರ್ ಎಸ್ ) ಜತೆ ಜಾತ್ಯತೀತ ಜನತಾದಳವೂ ಮಿತ್ರಪಕ್ಷವಾಗಿ ಸಕ್ರಿಯವಾಗಿ ಕೆಲಸ ಮಾಡಲಿದೆ ಹಾಗೂ ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವನ್ನು ಬಿಆರ್ ಎಸ್ ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಬೆಂಗಳೂರಿಗೆ ಹೊರಡುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿ, ಈ ಮೊದಲಿನಿಂದಲೂ ಜೆಡಿಎಸ್ ಮತ್ತು ಟಿಆರ್ ಎಸ್ ಪಕ್ಷಗಳು ಸಹಜ ಮಿತ್ರಪಕ್ಷಗಳಾಗಿದ್ದವು. ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಿಕೊಂಡು ಬಂದಿವೆ. ಈಗ ಟಿಆರ್ ಎಸ್ ರಾಷ್ಟ್ರೀಯ ಪಕ್ಷವಾಗಿ ಬಿಆರ್ ಎಸ್ ಹೆಸರಿನಲ್ಲಿ ಹೊರಹೊಮ್ಮಿರುವುದನ್ನು ನಮ್ಮ ಪಕ್ಷ ಮುಕ್ತಮನಸ್ಸಿನಿಂದ ಸ್ವಾಗತಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಆರ್ ಎಸ್ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮುಕ್ತ್ ರಾಜಕೀಯ ವಾತಾವರಣವಿದೆ. ಅದೇ ಸ್ಥಿತಿಯನ್ನು ಕರ್ನಾಟದಲ್ಲೂ ತರಲು ನಾನು ಮತ್ತು ಚಂದ್ರಶೇಖರ್ ರಾವ್ ಅವರೂ ನಿರ್ಧಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತಾದ ಪೂರ್ಣ ಬಹುಮತದ ಸರಕಾರ ರಚನೆ ಮಾಡುವ ಬಗ್ಗೆ ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಅವರು ಭರವಸೆ ನೀಡಿದ್ದಾರೆ ಎಂದರು.
2023ರ ಚುನಾವಣೆಯಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿ ಬಂದರೆ, ಅದು 2024ರ ಲೋಕಸಭೆ ಚುನಾವಣೆಗೆ ಹೊಸ ದಿಕ್ಸೂಚಿಯಾಗಲಿದೆ. ಕರ್ನಾಟಕವೂ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರಕಾರ ತರುವ ನಿಟ್ಟಿನಲ್ಲಿಯೂ ನಾವಿಬ್ಬರೂ ಚರ್ಚೆ ನಡೆಸಿದ್ದೇವೆ. ಅದಕ್ಕೆ ಇವತ್ತಿನ ಕಾರ್ಯಕ್ರಮ ವೇದಿಕೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.