ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ
Team Udayavani, Jun 30, 2021, 12:45 PM IST
ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ.ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.
ಇದನ್ನೂ ಓದಿ: ಫರ್ನೇಸ್ ಆಯಿಲ್ ಮಿಕ್ಸಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ : ನಾಲ್ವರು ವಶಕ್ಕೆ
ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು
ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷವಯಿಸಿರೋ ಜವಾಬ್ದಾರಿ ಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.
ಈ ವೇಳೆ ಮೈ ಸೇವಾ ಫೌಂಡೇಶನ್ ನಿಂದ ತರಕಾರಿ ಹಾಗೂ ದಿನಸಿಕಿಟ್ ವಿತರಣೆ ಮಾಡಿದರು. ಮೃಗಾಲಯದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೃಗಾಲಯದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು.
ಪ್ರಾಧಿಕಾರಾದ ಆಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ಸೇರಿದಂತೆ ಇತರರು ಭಾಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.