ಬಿ.ಎಸ್.ಯಡಿಯೂರಪ್ಪ ಆಪ್ತ ಮಂಜುನಾಥಗೌಡ ಜೆಡಿಎಸ್‌ಗೆ
Team Udayavani, Jan 24, 2018, 9:28 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರ ಆಪ್ತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಜೆಡಿಎಸ್ ಸೇರ್ಪಡೆಗೊಂಡಿದ್ದು, ಮುಂದಿನ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಸ್ಥಾಪಿಸಿದ್ದ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಂಜುನಾಥಗೌಡ, ಕಡಿಮೆ ಅಂತರದ ಮತಗಳಿಂದ ಪರಾಭವಗೊಂಡಿದ್ದರು. ಪದ್ಮನಾಭನಗರದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಮಂಜು ನಾಥಗೌಡ ಮಂಗಳವಾರ ಜೆಡಿಎಸ್ ಸೇರ್ಪಡೆಗೊಂಡರು. ಈ ವೇಳೆ ಎಚ್.ಡಿ.ದೇವೇಗೌಡರು ಮಾತನಾಡಿ, ಜೆಡಿಎಸ್ ರಾಜ್ಯದಲ್ಲಿ ಶಕ್ತಿಯುತವಾಗುತ್ತಿದೆ ಎಂಬುದಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ನಾಯಕರು ಜೆಡಿಎಸ್ ಸೇರ್ಪಡೆ ಯಾಗಲಿದ್ದಾರೆ ಎಂದರು. ಮಧು ಬಂಗಾರಪ್ಪ, ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್ ಇತರರು ಇದ್ದರು.
ಮಧು ಬಂಗಾರಪ್ಪ “ಆಪರೇಷನ್’
ಇತ್ತೀಚೆಗಷ್ಟೇ ಕಾರವಾರದ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಜೆಡಿಎಸ್‌ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಧು ಬಂಗಾರಪ್ಪ, ಮಂಜುನಾಥಗೌಡರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಉಸ್ತುವಾರಿ ಆಗಿರುವ ಅವರು, ಜೆಡಿಎಸ್ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳಲ್ಲಿ ಬೇರೆ ಬೇರೆ ಪಕ್ಷಗಳ ನಾಯಕರಿಗೆ ಗಾಳ ಹಾಕಿದ್ದಾರೆ. ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಾಯಕರು ಮಧು ಬಂಗಾರಪ್ಪರ ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದೆ.
ಜ. 25, ಫೆ. 4 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜೆಡಿಎಸ್ ಬೆಂಬಲವೂ ಇಲ್ಲ, ವಿರೋಧವೂ ಇಲ್ಲ. ಬಂದ್‌ಗಳಿಂದ ಮಹದಾಯಿ ವಿವಾದಕ್ಕೆ ಪರಿಹಾರ ಸಿಗುತ್ತಾ? ಇದನ್ನು ಸರ್ಕಾರಿ ಪ್ರೇರಿತ ಬಂದ್ ಎನ್ನುತ್ತಿದ್ದಾರೆ.
●ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.