ಸಿದ್ದರಾಮಯ್ಯ ಆಕಸ್ಮಾತ್ ಗೆದ್ದರೂ ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಯಡಿಯೂರಪ್ಪ
Team Udayavani, Sep 13, 2021, 11:32 AM IST
ಬೆಂಗಳೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಆಕಸ್ಮಾತಾಗಿ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗುವ ಕಾರಣದಿಂದ ಸಿಎಂ ಬೊಮ್ಮಾಯಿ ಜೊತೆ ಬಿಎಸ್ ವೈ ಮಾತುಕತೆ ನಡೆಸಿದರು. ಯಡಿಯೂರಪ್ಪನವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಪ್ರತಿಭಟನೆಗೆ ಸಿಎಂ ಬೊಮ್ಮಾಯಿ ಕಿಡಿ
ಬೊಮ್ಮಾಯಿ ಅವರು ಸಿಎಂ ಆಗಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸಹಕಾರ ಕೊಡಲು ಸಿದ್ದನಿದ್ದೇನೆ. ಬರುವ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇವೆ. ರಾಜ್ಯದ್ಯಾಂತ ಪ್ರವಾಸ ಮಾಡಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ ಎಂದು ಬಿಎಸ್ ವೈ ಹೇಳಿದರು.
ಒಬ್ಬ ಶಾಸಕನಾಗಿ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಯಾಗಿಯೇ ಕೆಲಸ ಮಾಡಬೇಕು ಎಂದೇನಿಲ್ಲ. ಸರ್ಕಾರದ ಒಳ್ಳೆಯ ಕೆಲಸಗಳನ್ನು ಶ್ಲಾಘಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.