ಹುಬ್ಬಳ್ಳಿ: ಕರ್ತವ್ಯಕ್ಕೆ ತೆರಳಿದ್ದ ಬಿ.ಎಸ್.ಎಫ್ ಯೋಧ ಹೃದಯಘಾತದಿಂದ ನಿಧನ
Team Udayavani, Aug 28, 2022, 12:14 PM IST
ಹುಬ್ಬಳ್ಳಿ: ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ತೆರಳಿದ್ದ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಬಿ.ಎಸ್.ಎಫ್ ಯೋಧ ಗಂಗಾಧರಯ್ಯ ಹಿರೇಮಠ ಅವರು ಕರ್ತವ್ಯದ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ.
ಪಶ್ಚಿಮ ಬಂಗಾಳದ ಕುಚ್ ಬಿಹಾರ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆ.27 ರಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಯೋಧ ಗಂಗಾಧರಯ್ಯ ಹಿರೇಮಠ ಅವರ ಮೃತ ದೇಹವನ್ನು ದೇಹಲಿಯಿಂದ ಮೂಲಕ ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಸೇನೆಯ ವಾಹನದ ಮೂಲಕ ಗ್ರಾಮಕ್ಕೆ ಬರುವ ನಿರೀಕ್ಷೆಯಿದೆ. ಇಲ್ಲಿಗೆ ಬರುವುದರೊಳಗೆ ರಾತ್ರಿಯಾಗುವ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆಯಾಗಬಾರದು ಎನ್ನುವ ಕಾರಣಕ್ಕೆ ಸೋಮವಾರ (ಆ.28) ಬೆಳಿಗ್ಗೆ ಹುಬ್ಬಳ್ಳಿಯಿಂದ ಗ್ರಾಮಕ್ಕೆ ಕರೆದೊಯ್ಯುವ ಇಂಗಿತವನ್ನು ಕುಟುಂಬದ ಸದಸ್ಯರು ವ್ಯಕ್ತಪಡಿಸಿದ್ದಾರೆ.
ರಜೆ ಮೇಲೆ ಆಗಮಿಸಿದ್ದ ಗಂಗಾಧರಯ್ಯ ಅವರು ಮಂಗಳವಾರ (ಆ.23) ರಂದು ಕರ್ತವ್ಯಕ್ಕೆ ತೆರಳಿದ್ದರು. ಇತ್ತೀಚಗಷ್ಟೇ ಮನೆಗೆ ಬಂದು ಹೋಗಿದ್ದ ಯೋಧನ ಅಗಲಿಕೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಕಳೆದ 28 ವರ್ಷಗಳಿಂದ ಸೇವೆಯಲ್ಲಿದ್ದರು. ಇನ್ನೆರಡು ವರ್ಷದಲ್ಲಿ ಸ್ವಯಂ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಗಂಗಾಧರಯ್ಯ ಅವರು ಪತ್ನಿ ಹಾಗೂ ಎಸ್.ಎಸ್.ಎಲ್.ಸಿ ಓದುತ್ತಿರುವ ಪುತ್ರಿಯಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.