140 ಶಾಸಕರೊಂದಿಗೆ ಮತ್ತೆ ಬಿಜೆಪಿ ಸರಕಾರ: ಬಿಎಸ್ವೈ
Team Udayavani, Nov 21, 2021, 7:40 AM IST
ಬಾಗಲಕೋಟೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಶಾಸಕರೊಂದಿಗೆ ಮತ್ತೆ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಮುಂದಿನ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶನಿವಾರ ಹಮ್ಮಿಕೊಂಡಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದಕ್ಕಾಗಿ ಮುಂದಿನ ತಿಂಗಳಿಂದ ಮತ್ತೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿಯೊಂದು ಜಿಲ್ಲೆಯ ಹಿರಿಯ-ಕಿರಿಯ ಮುಖಂಡರೊಂದಿಗೆ ಚರ್ಚಿಸಿ ಪಕ್ಷವನ್ನು ಬಲಪಡಿಸುತ್ತೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ ಕನಿಷ್ಠ 15 ಸ್ಥಾನಗಳನ್ನಾದರೂ ಗೆಲ್ಲುತ್ತೇವೆ ಎಂದು ಹೇಳಿದರು.
ವಿಧಾನ ಪರಿಷತ್ನಲ್ಲಿ ನಮಗೆ ಬಹು ಮತವಿಲ್ಲದ ಕಾರಣ ಜನಪರ ಕಾನೂನು, ನೀತಿ-ನಿಯಮ ರೂಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಲ್ಲಿಯೂ ಬಹುಮತ ಪಡೆಯಲು ಈ ಚುನಾವಣೆ ಅತಿ ಮುಖ್ಯವಾಗಿದೆ ಎಂದರು.
ಚುನಾವಣೆ ಸ್ಪರ್ಧೆ ವರಿಷ್ಠರ ನಿರ್ಧಾರ:
ನಾನು ಮುಖ್ಯಮಂತ್ರಿಯಾಗಿದ್ದಾಗಲೇ ರಾಜೀನಾಮೆ ನೀಡಿದ್ದೇನೆ. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು ನನ್ನ ಆದ್ಯತೆ ವಿಷಯವಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಚುನಾವಣೆ ರಾಜಕೀಯದಲ್ಲಿ ಇರಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.