ಎಂಎಲ್‌ಸಿ ಚುನಾವಣೆ ಅಭ್ಯರ್ಥಿ ಆಯ್ಕೆ ಸಮಿತಿ ರಚಿಸಿದ ಬಿಎಸ್‌ವೈ
Team Udayavani, Oct 18, 2017, 11:41 AM IST
ಬೆಂಗಳೂರು: ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಮುಂದಿನ ವರ್ಷದ ಜೂನ್ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಬಿಜೆಪಿ ಸಮಿತಿಗಳನ್ನು ರಚಿಸಿದೆ.
ಎರಡು ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಗೊಂದಲ ಮುಂದುವರಿದ ಹಿನ್ನೆಲೆಯಲ್ಲಿ ಪಕ್ಷದ ಸ್ಥಳೀಯ ಘಟಕಗಳು ಮತ್ತು ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಈ ಸಮಿತಿಗಳನ್ನು ರಚಿಸಲಾಗಿದೆ. ಆರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಐದು ಸಮಿತಿಗಳನ್ನು ರಚಿಸಲಾಗಿದೆ.
ಸಮಿತಿಯಲ್ಲಿ ಯಾರ್ಯಾರು?
ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್ ಕಟೀಲು, ಶಾಸಕ ಸಿ.ಟಿ. ರವಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಮೇಘರಾಜ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ, ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್, ಶಾಸಕ ಕೆ.ಜಿ. ಬೋಪಯ್ಯ, ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದರಾದ ಕರಡಿ ಸಂಗಣ್ಣ, ಶ್ರೀರಾಮುಲು, ಶಾಸಕರಾದ ಬಿ.ಜಿ. ಪಾಟೀಲ್, ದೊಡ್ಡನಗೌಡ್ರು, ಮಾಜಿ ಶಾಸಕ ವಾರಬಸಂತ ರೆಡ್ಡಿ ಅವರ ಸಮಿತಿ ರಚನೆಯಾಗಿದೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಸದ ಜಿ.ಎಂ. ಸಿದ್ದೇಶ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಮಾಜಿ ಸಂಸದ ಜಿ.ಎಸ್. ಬಸವರಾಜ್, ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್, ಬೆಂಗಳೂರು ಪದವೀದರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಕೇಂದ್ರ ಸಚಿವರಾದ ಅನಂತ್‌ಕುಮಾರ್, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷದ ಉಪನಾಯಕ ಆರ್. ಅಶೋಕ್, ಶಾಸಕ ಅರವಿಂದ ಲಿಂಬಾವಳಿ ಅವರನ್ನೊಳಗೊಂಡ ಸಮಿತಿ ರಚಿಸಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಸಮಿತಿಗಳು ನೀಡುವ ವರದಿ ಆಧರಿಸಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.