![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 20, 2020, 12:19 PM IST
ಬೆಂಗಳೂರು: ತಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ ಎಸ್ ಯಡಿಯೂರಪ್ಪ, ಪಾದರಾಯಣಪುರದಲ್ಲಿ ಗುಂಡಾವರ್ತನೆ ತೋರಿದವರ ವಿಷಯದಲ್ಲಿ ಮೃದು ಧೋರಣೆಯ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವತಂತ್ರ ಸ್ವತಂತ್ರರು. ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ ಎಂದಿದ್ಧಾರೆ.
ಬೆಂಗಳೂರಿನ ಪಾದರಾಯನಪುರದಲ್ಲಿ ರವಿವಾರ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಹೋದ ಕೋವಿಡ್ ಯೋಧರ ವಿರುದ್ಧ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 54 ಜನರನ್ನು ಬಂಧಿಸಲಾಗಿದೆ.
ಪಾದರಾಯಣಪುರದಲ್ಲಿ ಗುಂಡಾವರ್ತನೆ ತೋರಿದವರ ವಿಷಯದಲ್ಲಿ ಮೃದು ಧೋರಣೆಯ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸರ್ವತಂತ್ರ ಸ್ವತಂತ್ರರು.
ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸುವವರಿಂದ, ಪ್ರಾಣ ರಕ್ಷಣೆ ಮಾಡಿಕೊಳ್ಳಲು ಲಭ್ಯವಿರುವ ಎಲ್ಲ ರೀತಿಯ ಬಲಪ್ರಯೋಗ ಮಾಡಲು ಪೊಲೀಸರಿಗೆ ಮುಕ್ತ ಅವಕಾಶ ಇದೆ.— B.S. Yediyurappa (@BSYBJP) April 20, 2020
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.