ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ರಚನೆಗೆ ಬಿಎಸ್‌ವೈ ಮನವಿ
Team Udayavani, Mar 4, 2022, 6:12 AM IST
ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್ ಸಂದರ್ಭದಲ್ಲಿ ತಮ್ಮ ಜೀವನದ ಹಂಗು ತೊರೆದು ಜನರ ಆರೋಗ್ಯ ರಕ್ಷಣೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ.
ರಾಜ್ಯ ಸರ್ಕಾರ ಪ್ರತಿ ಐದು ವರ್ಷಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸುವ ಸಂಪ್ರದಾಯ ಬೆಳೆಸಿಕೊಂಡು ಬರಲಾಗುತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ 5ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೆ ತರಲಾಗಿತ್ತು. ಕೇಂದ್ರ ಸರ್ಕಾರ 2016 ರ 7 ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತಂದಿದೆ. ಅದರಂತೆ ದೇಶದ 25 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಜಾರಿಯಲ್ಲಿದೆ. ರಾಜ್ಯದ ಜಿಎಸ್‌ಡಿಪಿ ಗಮನಿಸಿದಾಗ ಕರ್ನಾಟಕ ದೇಶದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ 6ನೇ ಸ್ಥಾನದಲ್ಲಿದೆ. ರಾಜ್ಯದ ಅಭಿವೃದ್ದಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಕೇಂದ್ರ ಮಾದರಿಯ ವೇತನ ಜಾರಿಗೆ ಅಧಿಕಾರಿಗಳ ವೇತನ ಸಮಿತಿ ರಚಿಸುವಂತೆ ಮನವಿ ಮಾಡಿದ್ದಾರೆ. ಆದ್ದರಿಂದ ನೌಕರರ ಬೇಡಿಕೆಯಂತೆ 2022-23ನೇ ಸಾಲಿನ ಬಜೆಟ್‌ನಲ್ಲಿ ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವ ಬಗ್ಗೆ ಘೋಷಣೆ ಮಾಡುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.