ಮಕ್ಕಳ ಸ್ನೇಹಿ ಶಾಲಾ ಪರಿಸರ ನಿರ್ಮಿಸಿ: ಸಿಎಂ
ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸಮ್ಮಾನ
Team Udayavani, Sep 12, 2020, 6:27 AM IST
ಪ್ರಶಸ್ತಿ ಪುರಸ್ಕೃತ ಶಿಕ್ಷಕರು
ಬೆಂಗಳೂರು: ಶಿಕ್ಷಕರು ಕಳಂಕರಹಿತವಾಗಿ ಸಮಾನತೆ, ಸಹೋದರತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯವನ್ನು ಅಳವಡಿಸಿ ಕೊಂಡು ಮಕ್ಕಳ ಸ್ನೇಹಿ ಶಾಲಾ ಪರಿಸರ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಮ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳತ್ತ ಮಕ್ಕಳು
ಶಿಕ್ಷಣ ಇಲಾಖೆಯಲ್ಲಿ ಆಗಿರುವ ಅನೇಕ ಸುಧಾರಣೆಗಳಿಂದ ಇತ್ತೀಚೆಗೆ ಮಕ್ಕಳು ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದು ಸರಕಾರಿ ಶಾಲೆ ಯಾವ ರೀತಿ ಅಭಿವೃದ್ಧಿಯಾಗುತ್ತಿದೆ ಎಂಬುದನ್ನು ಸಾಬೀತು ಮಾಡುತ್ತಿದೆ ಎಂದರು.
ಶಾಲಾರಂಭ ದಿನ ನಿಗದಿಯಾಗಿಲ್ಲ
ಶಾಲಾರಂಭಕ್ಕೆ ಸಂಬಂಧಿಸಿ ಯಾವುದೇ ನಿರ್ಧಾರ ತೆಗೆದು ಕೊಂಡಿಲ್ಲ. ಕೇಂದ್ರದ ಮಾರ್ಗಸೂಚಿ ಅನ್ವಯವೇ ಮುಂದಿನ ಹೆಜ್ಜೆ ಇಡಲಿ ದ್ದೇವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಸರಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ| ಎಂ. ಆರ್. ದೊರೆಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ವೈ. ಎ. ನಾರಾಯಣ ಸ್ವಾಮಿ, ಅರುಣ್ ಶಹಾಪುರ, ಅ. ದೇವೇಗೌಡ, ಹನುಮಂತ ನಿರಾಣಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆಯುಕ್ತ ಡಾ| ಕೆ.ಜೆ. ಜಗದೀಶ್ ಮೊದ ಲಾದವರು ಉಪಸ್ಥಿತರಿದ್ದರು.
ಅಂಕಪಟ್ಟಿ ಸುರಕ್ಷೆ ತಂತ್ರಜ್ಞಾನ
ಬ್ಲಾಕ್ ಚೈನ್ ಟೆಕ್ನಾಲಜಿ ಮೂಲಕ ಎಸೆಸೆಲ್ಸಿ ಅಂಕಪಟ್ಟಿಗಳ ಮಾಹಿತಿ ಪಡೆಯುವ ಸರ್ಟಿಫಿಕೇಟ್ ಚೈನ್ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈಗಾಗಲೇ ಎಸೆಸೆಲ್ಸಿ ಅಂಕಪಟ್ಟಿಯನ್ನು ಡಿಜಿಟಲೀಕರಣಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಅಂಕಪಟ್ಟಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕವೇ ಮಾಡಬಹುದಾದ ವ್ಯವಸ್ಥೆಯನ್ನು ಜಾರಿ ಮಾಡಿದೆ. ಅಲ್ಲದೆ, ಅಂಕಪಟ್ಟಿ ವಿಚಾರವಾಗಿ ಕಾಗದ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಳಾ ತಿಳಿಸಿದರು.
ಖಾಸಗಿ ಶಿಕ್ಷಕರ ಸಹಾಯಕ್ಕೆ ಚಿಂತನೆ: ಸುರೇಶ್ ಕುಮಾರ್
ಶಿಕ್ಷಕ ಸ್ನೇಹಿ ವರ್ಗಾವಣ ನೀತಿಯನ್ನು ಜಾರಿಗೆ ತಂದಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ಸಹಾಯ ಮಾಡುವ ಬಗ್ಗೆ ಸರಕಾರ ಚಿಂತಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.