ಆರ್ ಎಸ್ಎಸ್ ಮೇಲೆ ಬುಲ್ಡೋಜರ್…: ಅಪಪ್ರಚಾರ ಎಂದ ಸಿದ್ದರಾಮಯ್ಯ
ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ
Team Udayavani, Jul 27, 2022, 1:33 PM IST
ಬೆಂಗಳೂರು : ”ಆರ್ ಎಸ್ ಎಸ್ ,ಶ್ರೀರಾಮಸೇನೆ,ಬಜರಂಗದಳದ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿ ಸಂಪೂರ್ಣ ಸುಳ್ಳು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಡಪಡಿಸಿದ್ದಾರೆ.
ಬಹಳಷ್ಟು ಬಿಜೆಪಿ ಬೆಂಬಲಿಗರು ಈ ವಿಚಾರವನ್ನು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು” ಎಂದಷ್ಟೇ ನಾನು ಹೇಳಿದ್ದು ಎಂದಿದ್ದಾರೆ.
ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ ಎಂದು ಹೇಳಿದ್ದಾರೆ.
ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.