![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 26, 2019, 3:00 AM IST
ಬೀದರ: ನೌಬಾದ ಸಮೀಪದ ಎಟಿಎಂವೊಂದರಲ್ಲಿ ಶನಿವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಕ್ಷಣಗಳಲ್ಲಿ ಕೊಠಡಿಯಲ್ಲಿ ಬೆಂಕಿ ಆವರಿಸಿಕೊಂಡು ಎಟಿಎಂ ಹೊತ್ತಿ ಉರಿದಿದೆ. ಭಾಲ್ಕಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನ ಎಟಿಎಂನಲ್ಲಿ ಈ ಅವಘಡ ಸಂಭವಿಸಿದ್ದು, ಎಷ್ಟು ಹಣ ಇತ್ತು ಹಾಗೂ ಎಷ್ಟು ಹಣ ಬೆಂಕಿಗೆ ಆಹುತಿ ಆಗಿದೆ ಎಂಬುದು ತಿಳಿದು ಬಂದಿಲ್ಲ.
ಎಟಿಎಂನಲ್ಲಿ ಹಣ ಬೆಂಕಿಗೆ ಆಹುತಿ ಆಗದಂತೆ ಸುರಕ್ಷತಾ ವ್ಯವಸ್ಥೆ ಇರುತ್ತದೆ. ಆದರೂ ಕೂಡ ಬೆಂಕಿಯ ಪ್ರಮಾಣ ಹೆಚ್ಚಿರುವ ಕಾರಣ ಈ ಕುರಿತು ಹಣ ಹಾಕುವ ಸಂಸ್ಥೆಯವರು ಬಂದು ಪರಿಶೀಲನೆ ನಡೆಸಿದ ನಂತರ ಪೂರ್ಣ ಮಾಹಿತಿ ಸಿಗಲಿದೆ.
ಎಟಿಎಂನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಸುದ್ದಿ ತಲುಪಿಸಿದರು. ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಎಟಿಎಂ ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ತನಿಖೆಯಿಂದ ಮಾತ್ರ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.