ವಿದ್ಯಾರ್ಥಿಗಳ ಮನೆ ಬಾಗಿಲಿಗೇ ಬಸ್ ಪಾಸ್
Team Udayavani, Jul 20, 2018, 1:09 PM IST
ಬೆಂಗಳೂರು: ರಿಯಾಯ್ತಿ ಪಾಸಿಗಾಗಿ ಬಸ್ ನಿಲ್ದಾಣಗಳಲ್ಲಿ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸಲು ಬಿಎಂಟಿಸಿಯು ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳ ಮನೆ ಬಾಗಿಲಿಗೇ ಪಾಸು ತಲುಪಿಸುವ ವ್ಯವಸ್ಥೆ ಜಾರಿಗೊಳಿಸಿದೆ.
ಇದಕ್ಕಾಗಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ಆಯಾ ಶಾಲಾ-ಕಾಲೇಜುಗಳ ಮೂಲಕವೂ ಪಡೆಯಬಹುದು. ಈ ಪ್ರಕ್ರಿಯೆಯು ತುಂಬಾ ಸರಳವಾಗಿದ್ದು, ಅನುಸರಿಸುವ ವಿಧಾನ ಹೀಗಿದೆ.
ಎಸ್ಸೆಸ್ಸೆಲ್ಸಿವರೆಗಿನ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳ ಮೂಲಕ ಪಡೆಯುವವರು ಶಾಲೆಯ ಅಧಿಕಾರಿಗಳಿಗೆ ಶುಲ್ಕ ಸಹಿತ ಬಸ್ ಪಾಸಿಗಾಗಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಪಡೆಯಲು ಬಿಎಂಟಿಸಿ ವೆಬ್‌ಸೈಟ್ ಅಥವಾ ಇ-ಗವರ್ನಾನ್ಸ್ ಆ್ಯಪ್‌ನಲ್ಲಿ 161 ಡಯಲ್ ಮಾಡುವ ಮೂಲಕ ಮೊಬೈಲ್‌ನಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ನಿಗಮದ ವೆಬ್‌ಸೈಟ್ ಪರದೆ ಮೇಲೆ ಸ್ಟೂಡೆಂಟ್ ಪಾಸ್ ಆಯ್ಕೆ ಇರುತ್ತದೆ. ಅದನ್ನು ಆಯ್ಕೆ ಮಾಡಿ, ವಿದ್ಯಾರ್ಥಿಯ ಹಾಜರಾತಿ ಸಂಖ್ಯೆ (ಎನ್‌ರೋಲ್‌ಮೆಂಟ್ ಸಂಖ್ಯೆ) ಮತ್ತು ಹೆಸರು ನಮೂದಿಸಬೇಕು. ನಂತರ ಸಂಪೂರ್ಣ
ಮಾಹಿತಿ ಬರುತ್ತದೆ. ಅಲ್ಲಿ ಪೋಷಕರ ಮೊಬೈಲ್ ಸಂಖ್ಯೆ ನೀಡಿದರೆ, ಆ ಸಂಖ್ಯೆಗೆ ಅರ್ಜಿ ಸಲ್ಲಿಕೆಯಾದ ಬಗ್ಗೆ ಸಂದೇಶ ಬರುತ್ತದೆ. ವಾರದಲ್ಲಿ ಆ ವಿದ್ಯಾರ್ಥಿಗೆ ಪಾಸು ಕೂಡ ಬರುತ್ತದೆ. ಪ್ರಸ್ತುತ ಪ್ರಾಥಮಿಕದಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಈ ಸೇವೆ ಲಭ್ಯ ಇದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.