ಯಾನದರ ಹೆಚ್ಚಳ ಸಾಧ್ಯತೆ
Team Udayavani, Sep 5, 2018, 6:00 AM IST
ಬೆಂಗಳೂರು: ಡೀಸೆಲ್, ಪೆಟ್ರೋಲ್ ದರ ಏರಿಕೆ ಬಿಸಿ ನಿಧಾನವಾಗಿ ತಟ್ಟುತ್ತಿರುವಂತೆಯೇ, ಸರ್ಕಾರಿ ಸಾರಿಗೆ ಬಸ್ ಪ್ರಯಾಣ ದರ ಶೀಘ್ರದಲ್ಲೇ ಏರುವ ಸಾಧ್ಯತೆ ಇದೆ. “”ಡೀಸೆಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಅನಿವಾರ್ಯ. ಶೇ.18 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಎಷ್ಟು ಏರಿಕೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಗುತ್ತದೆ” ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಡೀಸೆಲ್ ದರ ಏರಿಕೆಯಿಂದ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಮೂರು ತಿಂಗಳಲ್ಲಿ 180 ಕೋಟಿ ರೂ. ಹೊರೆಯಾಗಿದೆ. ಕೇಂದ್ರ ಸರ್ಕಾರ ಪ್ರತಿದಿನ ಇಂಧನ ದರ ಏರಿಸುತ್ತಿದೆ. ಹೀಗಾಗಿ, ಸಾರಿಗೆ ಸಂಸ್ಥೆಯ 4 ವಿಭಾಗದಲ್ಲಿ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದರು.
ಶೇ.18 ರಷ್ಟು ದರ ಹೆಚ್ಚಳ ಕಷ್ಟಸಾಧ್ಯ. ಎಷ್ಟು ಮಾಡಬಹುದು ಎಂಬ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತಿದೆ. ಸಂಸ್ಥೆಗೂ ನಷ್ಟವಾಗಬಾರದು, ಪ್ರಯಾಣಿಕರಿಗೂ ಹೊರೆಯಾಗದಂತೆ ಹೆಚ್ಚಿಸಲಾಗುವುದು ಎಂದರು. ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್‌ಗಳಿಂದ ಸುಲಿಗೆ ವಿಚಾರದಲ್ಲಿ ಸಾಕಷ್ಟು ಮೌಖಿಕ ದೂರು ಬರುತ್ತಿವೆ. ಆದರೆ, ದಾಖಲೆ ಇಲ್ಲದೆ ಕ್ರಮ ಅಸಾಧ್ಯ. ಖಾಸಗಿ ಬಸ್‌ಗಳ ಲಾಬಿ ಜೋರಾಗಿರುವುದು ಎಲ್ಲರಿಗೂ ಗೊತ್ತಿದೆ. ಪ್ರಯಾಣಿಕರೂ ಸುಲಿಗೆ ಮಾಡುವ ಬಸ್‌ಗಳ ವಿರುದ್ಧ ದೂರು ಕೊಡುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಂಡು ಜನರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಆದರೆ, ವಿಶೇಷ ಬಸ್ ಸಂಚಾರ ಎಂದು ದರ ಏರಿಕೆ ಮಾಡಲ್ಲ ಎಂದು ಹೇಳಿದರು.
ಶಾಮೀಲು ದೂರು: ಖಾಸಗಿ ಬಸ್ ಮಾಲೀಕರ ಜತೆ ಸಾರಿಗೆ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಮಾಹಿತಿಗಳು ಬಂದಿವೆ. ಇದನ್ನೂ ಹಂತ ಹಂತವಾಗಿ ಕಡಿವಾಣ ಹಾಕುತ್ತೇವೆ. ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲೀಕರ ನಡುವೆ ಇದು ತುಂಬಾ ವರ್ಷಗಳಿಂದ ನಡೆದುಕೊಂಡು ಬಂದಿದೆ. ಖಾಸಗಿ ಬಸ್ ಲಾಬಿ ತಡೆಯಲು 70 ವರ್ಷದಿಂದ ಸಾಧ್ಯವಾಗಿಲ್ಲ. ಮೂರು ತಿಂಗಳಲ್ಲಿ ನಿಯಂತ್ರಣ ಮಾಡಲು ಸಾಧ್ಯವೇ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಎಲೆಕ್ಟ್ರಿಕ್ ಬಸ್‌ಗಳನ್ನು ಖಾಸಗೀಕರಣಗೊಳಿಸುವ ಯೋಜನೆ ಇತ್ತು. ಆದರೆ, ಸಂಸ್ಥೆಯಿಂದಲೇ ಓಡಿಸಿದರೆ ಲಾಭ ಎಂಬ ವಾದವೂ ಇದೆ. ನಾವೇ ಓಡಿಸಬೇಕೆ ಅಥವಾ ಖಾಸಗಿಯವರಿಗೆ ವಹಿಸಬೇಕೇ ಎಂಬ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಉಚಿತ ಬಸ್ ಪಾಸ್ ಗೊಂದಲ
ಉಚಿತ ಬಸ್ ಪಾಸ್ ಕುರಿತು ಸಮಾಜ ಕಲ್ಯಾಣ ಸಚಿವರ ಜತೆ ಚರ್ಚಿಸಲಾಗಿದೆ. ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸಿಕೊಂಡು ಶೇ.25 ರಷ್ಟು ನೆರವು ನೀಡಲು ಸಚಿವರು ಒಪ್ಪಿದ್ದಾರೆ ಎಂದು ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಬಸ್ ಪಾಸ ತೆಗೆದುಕೊಂಡಿರುವುದರಿಂದ ಈ ವರ್ಷ ಜಾರಿ ಕಷ್ಟ ಸಾಧ್ಯ. ಈಗಾಗಲೇ ಪಾಸ್ ತೆಗೆದುಕೊಂಡವರನ್ನು ಬಿಟ್ಟು ಇನ್ನೂ ಪಾಸ್ ಪಡೆಯದವರಿಗೆ ಉಚಿತ ಬಸ್ ಪಾಸ್ ಸಿಗಬಹುದು. ಅದನ್ನು ಅತಿ ಶೀಘ್ರದಲ್ಲೇ ತೀರ್ಮಾನಿಸಲಾಗುವುದು ಎಂದರು.
ಪ್ರಸ್ತುತ ದರ ಎಲ್ಲೆಲ್ಲಿ ಎಷ್ಟೆಷ್ಟು?
ಪೆಟ್ರೋಲ್, ಡೀಸೆಲ್ ಬೆಲೆ ವಾರದಿಂದ ಏರಿಕೆಯಾಗುತ್ತಿದೆ. ಒಂದು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 3 ರಿಂದ 3.75 ರೂ.ವರೆಗೆ ಹೆಚ್ಚಳವಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಪೆಟ್ರೋಲ್ ದರ ಬೆಂಗಳೂರಿನಲ್ಲಿ 78.82 ರೂ. ಹಾಗೂ ಡೀಸೆಲ್ ದರ 70.01 ರೂ. ಇತ್ತು. ಪ್ರಸ್ತುತ ಪೆಟ್ರೋಲ್ 81.98 ರೂ., ಡೀಸೆಲ್ ದರ 73.72 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.