ಹಲವೆಡೆ ಬಸ್‌ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ


Team Udayavani, Aug 11, 2019, 3:06 AM IST

halavede-busd

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲವೆಡೆ ರಸ್ತೆಗಳ ಮೇಲೆ ಭೂಕುಸಿತ ಉಂಟಾಗಿ, ಮರಗಳು ಉರುಳಿದ ಪರಿಣಾಮ ಆ ಮಾರ್ಗಗಳಲ್ಲಿನ ವಾಹನ ಸಂಚಾರವನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಉಡುಪಿ-ಬೆಂಗಳೂರಿನ ನಾಲ್ಕೂ ಮಾರ್ಗ ಬಂದ್‌: ಉಡುಪಿ – ಶಿವಮೊಗ್ಗ, ಬೆಂಗಳೂರು, ಮೈಸೂರು ಭಾಗಗಳಿಗೆ ಹೋಗುವ 40 ಬಸ್‌ಗಳು ಉಡುಪಿಯ ಕೆಸ್ಸಾರ್ಟಿಸಿ ಡಿಪೋದಲ್ಲಿ ನಿಲುಗಡೆಯಾಗಿವೆ. ಉಡುಪಿಯಿಂದ ಬೆಂಗಳೂರಿಗೆ ತೆರಳುವ ನಾಲ್ಕೂ ಮಾರ್ಗಗಳು ಬಂದ್‌ ಆಗಿದ್ದು, ಸದ್ಯಕ್ಕೆ ಕೊಲ್ಲೂರು – ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತಲುಪುವಂತಹ ಒಂದೇ ಆಯ್ಕೆಯಿದೆ. ಉಳಿದಂತೆ ಯಲ್ಲಾಪುರ, ಚಾರ್ಮಾಡಿ, ಮೈಸೂರು, ವಿಜಯಪುರ, ಜಮಖಂಡಿ, ಹುಬ್ಬಳ್ಳಿ, ಧಾರವಾಡ ಮಾರ್ಗಗಳು ಸಂಪೂರ್ಣ ಬಂದ್‌ ಆಗಿವೆ.

ಕೊಡಗಿಗೆ ಸಂಚಾರ ಅಸ್ತವ್ಯಸ್ತ: ಮಡಿಕೇರಿ – ಕುಶಾಲನಗರ-ಹಾಸನ ರಾಜ್ಯ ಹೆದ್ದಾರಿ ಜಲಾವೃತ. ಹಾಸನ ಕಡೆಗೆ ತೆರಳುವ ಮತ್ತು ಹಾಸನದ ಕಡೆಯಿಂದ ಕೊಡಗಿಗೆ ಆಗಮಿಸುವವರು ಸಕಲೇಶಪುರ-ಶನಿವಾರಸಂತೆ-ಸೋಮವಾರಪೇಟೆ-ಸುಂಟಿಕೊಪ್ಪ ಮಾರ್ಗವಾಗಿ ಬಳಸು ದಾರಿಯಲ್ಲಿ ಸಂಚರಿಸಬೇಕಿದೆ. ತುರ್ತು ಕಾರ್ಯ ನಿಮಿತ್ತ ತೆರಳುವವರನ್ನು ಕುಶಾಲನಗರದಿಂದ ಕೊಪ್ಪದವರೆಗೆ ಬೋಟ್‌ಗಳಲ್ಲಿ ಒಯ್ದು, ಅಲ್ಲಿಂದ ವಾಹನಗಳಲ್ಲಿ ಕಳುಹಿಸಲಾಗುತ್ತಿದೆ. ಮಡಿಕೇರಿಯಿಂದ ಮೈಸೂರು-ಬೆಂಗಳೂರು ಕಡೆಗೆ ತೆರಳುವವರನ್ನು ಮಡಿಕೇರಿಯ ಸುದರ್ಶನ ವೃತ್ತದ ಬಳಿ ತಡೆದು ನಿಲ್ಲಿಸಲಾಗುತ್ತಿದೆ. ಇತ್ತ ಗುಡ್ಡೆಹೊಸೂರು ಬಳಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ವಾಹನಗಳನ್ನು ತಡೆದು ಹಾರಂಗಿ ಮಾರ್ಗವಾಗಿ ಕಳುಹಿಸಲಾಗುತ್ತಿದೆ.

ಕರ್ನಾಟಕ-ಕೇರಳ ಸಂಚಾರ ಬಂದ್‌: ಗುಂಡ್ಲುಪೇಟೆ – ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸುಲ್ತಾನ್‌ ಬತ್ತೇರಿ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ನೀರಿನ ಹರಿವು ಹೆಚ್ಚಿದ ಪರಿಣಾಮ ಎಲ್ಲಾ ವಾಹನಗಳನ್ನೂ ಕರ್ನಾಟಕ ಗಡಿ ಪ್ರದೇಶವಾದ ಮದ್ದೂರು ಚೆಕ್‌ ಪೋಸ್ಟ್‌ ಸಮೀಪ ತಡೆ ಹಿಡಿಯಲಾಗಿದೆ. ಇದರಿಂದಾಗಿ ಕರ್ನಾಟಕ ಮತ್ತು ಕೇರಳ ಸಂಪರ್ಕ ತಾತ್ಕಾಲಿಕವಾಗಿ ಬಂದ್‌ ಆಗಿದೆ. ಕೇರಳ ಗಡಿ ಭಾಗದಲ್ಲಿ ಹರಿಯುವ ಕಬಿನಿ ನೀರಿನ ರಭಸ ಹೆಚ್ಚಾದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಇದರಿಂದಾಗಿ ನಿಂತಿರುವ ವಾಹನಗಳ ಮೇಲೆಯೇ ನೀರು ಹರಿಯುತ್ತಿದ್ದು, ಕಾರು, ಲಾರಿ ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. ಅಪಾಯದಲ್ಲಿ ಸಿಲುಕಿದ್ದವರನ್ನು ಪೊಲೀಸ್‌ ಸಿಬ್ಬಂದಿ ಬೋಟ್‌ನ ಮೂಲಕ ರಕ್ಷಿಸಿದರು.

ಮಹಾರಾಷ್ಟ್ರ ಸಂಪರ್ಕ ಕಡಿತ
* ಬೆಳಗಾವಿ-ಮಹಾರಾಷ್ಟ್ರದ ಕೊಲ್ಹಾಪುರ, ಮೀರಜ್‌, ಸಾಂಗ್ಲಿ, ಪುಣೆ, ರತ್ನಗಿರಿ, ಇಚಲಕರಂಜಿ ಪಟ್ಟಣಗಳಿಗೆ ತೆರಳುತ್ತಿದ್ದ ಬಸ್‌ಗಳ ಸಂಚಾರ ರದ್ದು.

* ನಿಪ್ಪಾಣಿ-ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ-4, ಬೆಳಗಾವಿ-ಪಣಜಿ, ಕಾಗವಾಡ್‌-ಮೀರಜ್‌ ರಸ್ತೆ ಸಂಪರ್ಕ ಬಂದ್‌.

* ಧರ್ಮಸ್ಥಳಕ್ಕೆ ತೆರಳುವ ಬಸ್‌ಗಳ ಸಂಚಾರವೂ ರದ್ದು.

* ಮಲಪ್ರಭಾ ಪ್ರವಾಹ, ಹುಬ್ಬಳ್ಳಿ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸಂಚಾರ ಸಂಪೂರ್ಣ ಸ್ಥಗಿತ.

* ಹುಬ್ಬಳ್ಳಿ-ಅಂಕೋಲಾ, ಯಲ್ಲಾಪುರ- ಮುಂಡಗೋಡ ರಸ್ತೆ ಸಂಚಾರ ಬಂದ್‌.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.