ಡಿಸೆಂಬರ್ 15 ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼ ಕಾರ್ಯಾರಂಭ: ಡಾ.ಕೆ.ಸುಧಾಕರ್
ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು, 160 ವೈದ್ಯರ ನೇಮಕ ಪೂರ್ಣ
Team Udayavani, Oct 6, 2022, 6:46 PM IST
ಬೆಂಗಳೂರು : ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼಗಳನ್ನು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ 15 ರ ವೇಳೆಗೆ ಕಾರ್ಯಾರಂಭಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯ ಮಹಾಲಕ್ಷ್ಮಿಲೇಔಟ್‌ನ ವಾರ್ಡ್-58 ರ ಪಂಚಮುಖಿ ದೇವಸ್ಥಾನದ ಸಮೀಪ ʼನಮ್ಮ ಕ್ಲಿನಿಕ್ ಮಾದರಿ ರೂಪಿಸಿದ್ದು, ಇದನ್ನು ಸಚಿವರು ವೀಕ್ಷಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ಕ್ಲಿನಿಕ್‌ನಲ್ಲಿ ವೈದ್ಯ, ನರ್ಸಿಂಗ್ ಸಿಬ್ಬಂದಿ, ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಿರುತ್ತವೆ. ಬಿಬಿಎಂಪಿ ವ್ಯಾಪ್ತಿಯ ಕ್ಲಿನಿಕ್‌ಗಳಿಗೆ ವೈದ್ಯರ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 160 ವೈದ್ಯರು ಈಗಾಗಲೇ ನೇಮಕ ಆಗಿದ್ದಾರೆ. ಉಳಿದ ಎಲ್ಲಾ ಸಿಬ್ಬಂದಿ ಹುದ್ದೆ ತುಂಬಿದೆ. ಬಾಕಿ ಉಳಿದ 83 ಕ್ಕೆ ಮತ್ತೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಹತ್ತು ದಿನಗಳೊಳಗೆ ಇದು ಕೂಡ ಆಗಲಿದೆ ಎಂದರು.
ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್‌ನಲ್ಲಿ ಒಂದು ಕ್ಲಿನಿಕ್ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದೆ ಎಂದರು.
ಮಾರ್ಗಸೂಚಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ ನಗರ ಪ್ರದೇಶಗಳಲ್ಲಿ ಇದು ಕಡಿಮೆ ಇದೆ. ಆದ್ದರಿಂದಲೇ ಈ ಯೋಜನೆ ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಸಂಪೂರ್ಣ ಆರ್ಥಿಕ ಸಹಕಾರ ನೀಡಿದೆ. ಹೆಚ್ಚು ಜನರು ಬಂದು ಆರೋಗ್ಯ ತಪಾಸಣೆ, ಚಿಕಿತ್ಸೆಯ ಸೇವೆ ಪಡೆಯಬೇಕು. ಬಿಬಿಎಂಪಿಯಲ್ಲಿ ಈಗ 198 ವಾರ್ಡ್‌ಗಳಿವೆ. ಮುಂದೆ ವಾರ್ಡ್‌ಗಳ ಸಂಖ್ಯೆ ಹೆಚ್ಚಾಗಬಹುದು. ಇದಕ್ಕೆ ಪೂರಕವಾಗಿ ವಾರ್ಡ್‌ಗೆ ಒಂದರಂತೆ ಈಗಲೇ ಹೆಚ್ಚಿನ ಕ್ಲಿನಿಕ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಕಟ್ಟಡಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್ ರಿಕರಿಂಗ್ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವುಗಳ ಕುರಿತು ಕ್ಲಿನಿಕ್ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ನಾಳೆ ಸಭೆ
ಕಳೆದ 16 ವರ್ಷದಿಂದ ಜಿವಿಕೆ ಸಂಸ್ಥೆ ಆಂಬ್ಯುಲೆನ್ಸ್ ಸೇವೆ ನೀಡುತ್ತಿದೆ. ಒಪ್ಪಂದದ ಪ್ರಕಾರ ಸಂಸ್ಥೆಯೇ ಸಿಬ್ಬಂದಿಗೆ ವೇತನ ನೀಡಬೇಕು. ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತಿದೆ. ಸಿಬ್ಬಂದಿಗೆ ವೇತನ ನೀಡದಿದ್ದರೆ, ಸಂಸ್ಥೆಯವರು ಹಾಗೂ ಸಿಬ್ಬಂದಿ ಕಡೆಯವರನ್ನು ಕರೆಸಿ ನಾಳೆ ಸಭೆ ನಡೆಸಲಾಗುವುದು. ಈಗಾಗಲೇ ಅಧಿಕಾರಿಗಳು ಚರ್ಚೆ ಮಾಡಿದ್ದು, ಒಂದು ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಲಾಗಿದೆ. ಈ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಲಾಗಿದೆ ಎಂದರು.
ಆಂಬ್ಯುಲೆನ್ಸ್ ಟೆಂಡರ್ ಅಂತಿಮಗೊಳ್ಳುತ್ತಿದ್ದು, ಎರಡು ತಿಂಗಳೊಳಗೆ ಮುಗಿಯಲಿದೆ. ಬಳಿಕ ಸೇವೆ ನೀಡುವವರು ಯಾರೆಂದು ತೀರ್ಮಾನವಾಗಲಿದೆ. ಹಳೆಯ ಸಂಸ್ಥೆಯಿಂದ 2008 ರಲ್ಲಿ ಸೇವೆ ಆರಂಭಿಸಿತ್ತು. ಆದರೆ ಈ ಸಂಸ್ಥೆಯಿಂದ ನಿರೀಕ್ಷಿತ ಸೇವೆ ದೊರೆಯತ್ತಿಲ್ಲ. ಅತ್ಯುತ್ತಮವಾದ ಆಂಬ್ಯುಲೆನ್ಸ್ ಸೇವೆ ನೀಡಲೆಂದೇ ಸರ್ಕಾರ ಹೊಸ ಯೋಜನೆ ರೂಪಿಸಿದೆ ಎಂದರು.
ಬೈಕ್ ಆಂಬ್ಯುಲೆನ್ಸ್ ಸಂಬಂಧ ರಚಿಸಿದ ಸಮಿತಿಗಳು, ಇದರ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದವು. ಆದ್ದರಿಂದ ಹೊಸ ಟೆಂಡರ್‌ನಲ್ಲಿ ಬೈಕ್ ಆಂಬ್ಯುಲೆನ್ಸ್ ಪ್ರಸ್ತಾಪ ಇಲ್ಲ. ಆದರೂ ಅಂಗಾಂಗ ದಾನದ ಸಂದರ್ಭ, ರೋಗಿಗಳ ವರ್ಗಾವಣೆಗೆ ಏರ್ ಆಂಬ್ಯುಲೆನ್ಸ್ ಪರಿಚಯಿಸಲು ಸರ್ಕಾರ ಉದ್ದೇಶಿಸಿದೆ. ಇನ್ನೂ ರೂಪರೇಷೆ ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು.
ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡುವ ಅಭಿಯಾನ ಮಾಡಲಾಗುತ್ತಿದೆ. 30 ವರ್ಷ ಮೇಲ್ಪಟ್ಟ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಆಹಾರ ಸುರಕ್ಷತಾ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಮ್‌ಗಳಲ್ಲಿ ಬಳಸುವ ಪೌಡರ್ ಬಗ್ಗೆ ಮಾಹಿತಿ ಕಲೆಹಾಕಲು ಸೂಚಿಸಲಾಗಿದೆ. ಆಹಾರದಲ್ಲಿ ಗುಣಮಟ್ಟ ಇಲ್ಲದಿದ್ದರೆ, ಅನುಮತಿ ಇಲ್ಲದಿದ್ದರೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.