ಉಪ ಸಮರ: ಮತಗಳಿಕೆಯಲ್ಲಿ ಬಿಜೆಪಿ ದಾಖಲೆ

ಆರ್‌.ಆರ್‌. ನಗರ ಶೇ. 50ಕ್ಕೂ ಹೆಚ್ಚು ಮತ; ಶಿರಾ 50 ಸಾವಿರಕ್ಕೂ ಅಧಿಕ ಓಟು

Team Udayavani, Nov 11, 2020, 5:30 AM IST

By-Election-2

ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ. 50ಕ್ಕೂ ಹೆಚ್ಚು ಮತಗಳನ್ನು ಪಡೆದಿರುವ ಬಿಜೆಪಿ ಅಭ್ಯರ್ಥಿ ಪ್ರಚಂಡ ಗೆಲವು ಸಾಧಿಸಿದರೆ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಳೆದ ಚುನಾವಣೆಯಲ್ಲಿ ಪಡೆದಿದ್ದ ಮತಗಳಿಗಿಂತ 50 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ.

ಆರ್‌.ಆರ್‌. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 1.25 ಲಕ್ಷ ಮತಗಳನ್ನು ಪಡೆದು ದಾಖಲೆಯ ವಿಜಯ ಸಾಧಿಸಿದರೆ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ| ರಾಜೇಶ ಗೌಡ 74 ಸಾವಿರ ಮತಗಳನ್ನು ಪಡೆದು ಜಯ ದಾಖಲಿಸಿ¨ªಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮೊದಲ ಬಾರಿಗೆ ಖಾತೆ ತೆರೆದಿದೆ. ಆರ್‌.ಆರ್‌. ನಗರದಲ್ಲಿ ಒಟ್ಟು 2.09 ಲಕ್ಷ ಮತಗಳ ಪೈಕಿ ಬಿಜೆಪಿ ಅಭ್ಯರ್ಥಿ 1.25 ಲಕ್ಷ ಮತಗಳನ್ನು ಪಡೆದಿದ್ದರೆ, ಶಿರಾ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು 1.79 ಲಕ್ಷ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ 74,522 ಮತಗಳನ್ನು ಪಡೆದಿದ್ದಾರೆ.

ಆರ್‌.ಆರ್‌. ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಕುಸುಮಾ 67 ಸಾವಿರ ಮತಗಳನ್ನು ಪಡೆದಿದ್ದು, 2018ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಡೆದಿದ್ದ ಮತಗಳಿಗಿಂತ 40 ಸಾವಿರ ಮತಗಳನ್ನು ಕಡಿಮೆ ಪಡೆದಿದ್ದಾರೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮುನಿರತ್ನ 1.08 ಲಕ್ಷ ಮತಗಳನ್ನು ಪಡೆದಿದ್ದರು. ಕಳೆದ ಬಾರಿ 60 ಸಾವಿರ ಮತಗಳನ್ನು ಪಡೆದಿದ್ದ ಜೆಡಿಎಸ್‌ ಅಭ್ಯರ್ಥಿ ಈ ಬಾರಿ ಕೇವಲ 10 ಸಾವಿರ ಮತಗಳನ್ನು ಪಡೆದಿದ್ದಾರೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಮುನಿರಾಜುಗೌಡ 82 ಸಾವಿರ ಮತಗಳನ್ನು ಪಡೆದಿದ್ದರು.

ಶಿರಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕೇವಲ 16 ಸಾವಿರ ಮತಗಳನ್ನು (ಶೇ. 9) ಪಡೆದಿದ್ದ ಬಿಜೆಪಿ ಉಪಚುನಾವಣೆಯಲ್ಲಿ 74 ಸಾವಿರ ಮತಗಳನ್ನು ಪಡೆದಿದೆ. ಕಳೆದ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರಿಗೆ 63 ಸಾವಿರ ಮತಗಳು ಸಿಕ್ಕಿದ್ದರೆ, ಉಪ ಚುನಾವಣೆಯಲ್ಲಿ 61 ಸಾವಿರ ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬಿ. ಸತ್ಯನಾರಾಯಣ 74 ಸಾವಿರ ಮತಗಳನ್ನು ಪಡೆದು ಗೆದ್ದಿದ್ದರೆ, ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರ ಪತ್ನಿ ಅಮ್ಮಾಜಮ್ಮ 35 ಸಾವಿರ ಮತಗಳನ್ನು ಪಡೆದಿದ್ದು ಕಳೆದ ಬಾರಿಗಿಂತ 40 ಸಾವಿರ ಕಡಿಮೆ ಮತಗಳು ಬಂದಿವೆ.

ಕಳೆದ ಬಾರಿ ಆರ್‌.ಆರ್‌. ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿನ ಅಂತರ ಬಿಜೆಪಿ ಅಭ್ಯರ್ಥಿಗಿಂತ 25,492 ಇದ್ದರೆ, ಈ ಬಾರಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರ 58 ಸಾವಿರ ಇದೆ. ಶಿರಾ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯ ಗೆಲುವಿನ ಅಂತರ 10 ಸಾವಿರ ಇದ್ದರೆ, ಈ ಬಾರಿ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರ 13 ಸಾವಿರ ಇದೆ. ಉಳಿದಂತೆ ಇತರ ಪಕ್ಷಗಳು ಹಾಗೂ ಪಕ್ಷೇತರರ ನಗಣ್ಯ ಸಾಧನೆ ಎರಡೂ ಕ್ಷೇತ್ರಗಳಲ್ಲಿ ಯಥಾ ರೀತಿಯಲ್ಲಿದೆ.

ಟಾಪ್ ನ್ಯೂಸ್

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.