By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು...
Team Udayavani, Jun 23, 2024, 6:37 PM IST
ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಸಂಜೆ ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣ ಬಮೂಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್ ಡಿಕೆ, ‘ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಚನ್ನಪಟ್ಟಣ ಉಪಚುನಾವಣೆಗೆ ಯೋಗೇಶ್ವರ್ ಆಗಬಹುದು. ಇಲ್ಲ ಜೆಡಿಎಸ್ ನವರೆ ಆಗಬಹುದು, ಎನ್ ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ’ ಎಂದರು.
ಹಾಲು ಉತ್ಪಾದಕರಿಗ ದೇಶಾದ್ಯಂತ ಪ್ರೋತ್ಸಾಹ ಧನ ಕೊಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡುತ್ತೇನೆ. ಈ ಬಗ್ಗೆ ಪ್ರಧಾನಿ ಜೊತೆ ಮಾತನಾಡುತ್ತೇನೆ. ದೇಶದ ಎಲ್ಲಾ ರೈತರಿಗೆ 2 ರಿಂದ 3 ರೂ. ಪ್ರತಿ ಲೀಟರ್ ಗೆ ಕೊಡುವಂತೆ ಮನವೊಲಿಸುತ್ತೇನೆ ಎಂದು ಹೇಳಿದರು.
‘ಚನ್ನಪಟ್ಟಣ ಉದ್ದಾರ ಮಾಡುತ್ತೇನೆ ಎಂದು ಬಂದಿರುವವರನ್ನು ಮೊದಲು ಚನ್ನಪಟ್ಟಣ ತಾಲೂಕಿಗೆ ಬರ ಬೇಕಿರುವ 61 ಕೋಟಿ ಹಾಲಿನ ಪ್ರೋತ್ಸಾಹಧನ ಕೊಡಿ ಎಂದು ಕೇಳಿ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.