C.P. Yogeshwara;ಕಣ್ಣೀರು ಯಾರೂ ಹಾಕಬಹುದು.. ಬೆವರನ್ನಲ್ಲ
Team Udayavani, Nov 12, 2024, 6:20 AM IST
ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಐದು ಬಾರಿ ಶಾಸಕನಾದರೂ ರಾಜಕೀಯವಾಗಿ ಸ್ಥಿರವಾಗಿ ನಿಲ್ಲಲು ಸಾಧ್ಯವಾಗಲಿಲ್ಲ. ಆದರೆ ಜನರ ಒಳಿತಿಗಾಗಿ ಈ ಸ್ಥಿತ್ಯಂತರ ಎಂಬ ಕಾರಣಕ್ಕೆ ನನಗೆ ಬೇಸರವಿಲ್ಲ. ಎರಡು ಬಾರಿಯ ಸೋಲಿಗೆ ಕಾರಣ ತಿಳಿಯದಿರುವುದು ಬೇಸರ ತರಿಸಿದೆ ಎಂದು ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಹೇಳಿದರು.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕುಮಾರಸ್ವಾಮಿ ಚನ್ನಪಟ್ಟಣವನ್ನು ಸ್ಪಿನ್‌ಬೋರ್ಡ್ ಮಾಡಿಕೊಂಡರು. ಆದರೆ ಅಭಿವೃದ್ಧಿಯನ್ನೇ ಮಾಡಲಿಲ್ಲ. ರಾಮನಗರ ಜಿಲ್ಲೆ ನೀರಾವರಿಗೆ ಯಾಕೆ ನೀವು ಸಿಎಂ ಆದಾಗ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಕಣ್ಣೀರು ಯಾರು ಬೇಕಾದರೂ ಬರಿಸಿಕೊಳ್ಳಬಹುದು. ಆದರೆ ಬೆವರು ಹಾಗಲ್ಲ. ನೀರಾವರಿಗಾಗಿ ನಾನು ಕಾಡುಮೇಡು ಅಲೆದಾಡಿದ್ದೇನೆ ಎಂದರು.
ನನಗೆ ಟಿಕೆಟ್ ಕೊಡುವ ಭರವಸೆ ನೀಡಿ ಮಾತು ತಪ್ಪಿದರು. ಇವರ ನಡವಳಿಕೆ ನೋಡಿ ಹರಕೆಯ ಕುರಿಯಾಗುತ್ತೇನೆ ಎಂದು ಆತಂಕಗೊಂಡು ಕಾಂಗ್ರೆಸ್ ಸೇರಿದೆ. ನಿಖೀಲ್ ಮಂಡ್ಯ ಅನಂತರ ರಾಮನಗರಕ್ಕೆ ಬಂದರು. ಈಗ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಬೇಕಾದಷ್ಟು ಕ್ಷೇತ್ರಗಳಿದ್ದು, ನನಗೆ ಇರುವುದು ಚನ್ನಪಟ್ಟಣ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.