
ಕೈ ಬಿಟ್ಟ ಸಿ.ಪಿ.ಯೋಗೀಶ್ವರ್; ಡಿಕೆಶಿ ವಿರುದ್ಧ ಕಿಡಿ
Team Udayavani, Oct 14, 2017, 12:26 PM IST

ಚನ್ನಪಟ್ಟಣ: ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ಗುಡ್‌ಬೈ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್ ನಾನು ಕಾಂಗ್ರೆಸ್ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ ಎಂದರು.
‘ಕಳೆದ ನಾಲ್ಕು ವರ್ಷಗಳಿಂದ ನಾನು ಕಾಂಗ್ರೆಸ್‌ನಲ್ಲಿದ್ದೆ, ಆದರೆ ನಾಯಕರು ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ. ನನಗೆ ಕಾಂಗ್ರೆಸ್ ಟಿಕೇಟ್ ಕೈ ತಪ್ಪಲು ಸಚಿವ ಡಿ.ಕೆ.ಶಿವಕುಮಾರ್ ಅವರೇ ಕಾರಣ’ ಎಂದು ಕಿಡಿ ಕಾರಿದರು.
‘ಡಿಕೆಶಿ ನನ್ನ ಮುಂದೆಯೆ ಟಿಕೇಟ್ ಹರಿದು ಹಾಕಿದರು. ಏ ಯಾಕಯ್ಯ ನಿನಗೆ ಟಿಕೇಟ್ ಎಂದು. ಅವರು ನನ್ನನ್ನು ರಾಜಕೀಯವಾಗಿ ಬೆಳೆಸಿದರು’ ಎಂದು ವ್ಯಂಗ್ಯವಾಡಿದವರು. ಇದೇ ವೇಳೆ ‘ಡಿಕೆಶಿ ಅವರಿಗೆ ಹಣ ಬಲವಿದೆ, ನನಗೆ ಜನಬಲವಿದೆ’ ಎಂದರು.
ರಾಜಕೀಯ ಜೀವನದ ಮುಂದಿನ ತೀರ್ಮಾನವನ್ನು ಅಕ್ಟೋಬರ್ 22 ಕ್ಕೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
2008 ರಲ್ಲಿ ಆಪರೇಷನ್ ಕಮಲಕ್ಕೆ ಗುರಿಯಾಗಿ ಕಾಂಗ್ರೆಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಚಿವರಾಗಿದ್ದರು, ಉಪಚುನವಾಣೆಯಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾಗಿದ್ದರು.
2013 ರ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಜಯಗಳಿಸಿದ್ದ ಯೋಗೀಶ್ವರ್ ಆಡಳಿತೂರೂಢ ಕಾಂಗ್ರೆಸ್‌ಗೆ ಪುನರ್ ಸೇರ್ಪಡೆಯಾಗಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು.
ಇದೀಗ ಜೆಡಿಎಸ್ ಸೇರ್ಪಡೆ ಕುರಿತಾಗಿ ಮಾತುಕತೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.