ಇನ್ನು  ಸಂಪುಟ ಕಸರತ್ತು

Team Udayavani, Jul 30, 2021, 7:50 AM IST

ಇನ್ನು  ಸಂಪುಟ ಕಸರತ್ತು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ವರಿಷ್ಠರಿಗೆ ಸಚಿವ ಸಂಪುಟ ರಚನೆಯ ತಲೆನೋವು ಆರಂಭವಾಗಿದೆ. ಪ್ರಮುಖ ಸ್ವಾಮೀಜಿಗಳು ತಮ್ಮ ಸಮುದಾಯಗಳ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿರುವುದು ಇದಕ್ಕೆ  ಕಾರಣ.

ಮುಖ್ಯಮಂತ್ರಿ ಬೊಮ್ಮಾಯಿ ತತ್‌ಕ್ಷಣ ಸಚಿವ ಸಂಪುಟ ರಚಿಸುವ ಲೆಕ್ಕಾಚಾರದಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಆಷಾಢ ಮುಗಿ ಯುವವರೆಗೂ ಆಕಾಂಕ್ಷಿಗಳು ಕಾಯ ಬೇಕಾಗ ಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರ ವಾರ ದಿಲ್ಲಿಗೆ ತೆರಳಲಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ತೀರ್ಮಾನಿಸಿದ್ದರೂ ಸಂಪುಟ ರಚನೆ ಕುರಿತು ಚರ್ಚೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಸ್ಥಾನಕ್ಕೆ ಒತ್ತಡ:

ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಲವು ನಾಯಕರು ಉಪ ಮುಖ್ಯಮಂತ್ರಿ ಸ್ಥಾನವಾದರೂ ಸಿಗಲಿ ಎಂದು ಪ್ರಯತ್ನಿಸು ತ್ತಿದ್ದಾರೆ. ಕೆಲವು ನಾಯಕರ ಪರವಾಗಿ ಆಯಾ ಸಮುದಾಯಗಳ ಸ್ವಾಮೀಜಿಗಳು ಒತ್ತಾ ಯಿಸುತ್ತಿದ್ದಾರೆ. ಕುರುಬ ಸಮು ದಾಯದ ಸ್ವಾಮೀಜಿಗಳು ಕೆ.ಎಸ್‌. ಈಶ್ವರಪ್ಪ ಪರವಾಗಿ ಆಗ್ರಹಿಸಿದ್ದಾರೆ. ಡಿಸಿಎಂ ಹುದ್ದೆ ನೀಡಿದರೆ ಬೇಡ ಎನ್ನುವುದಿಲ್ಲ ಎಂದು ಈಶ್ವರಪ್ಪ ಕೂಡ ಹೇಳಿದ್ದಾರೆ.

ಡಿಸಿಎಂ ಸ್ಥಾನದ ಇನ್ನೋರ್ವ ಆಕಾಂಕ್ಷಿ ಆರ್‌. ಅಶೋಕ್‌ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ  ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಮೂಲಕ ಅಮಿತ್‌ ಶಾ ಮತ್ತು ಜೆ.ಪಿ. ನಡ್ಡಾ ಭೇಟಿಗೆ ಕಸರತ್ತು ನಡೆಸಿದ್ದಾರೆ.

ಡಿಸಿಎಂ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದ ಬಿ. ಶ್ರೀರಾಮುಲು ವರಿಷ್ಠರಿಂದ ಭರವಸೆ ದೊರೆಯದೆ ಬೇಸರಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೊರಗಿಡುವ ಗೊಂದಲ:

ಹಿಂದಿನ ಸರಕಾರದಲ್ಲಿ ಸಚಿವರಾಗಿದ್ದವರಲ್ಲಿ ಯಾರನ್ನು ಸಂಪುಟದಿಂದ ಹೊರಗಿಡಬೇಕೆಂಬ ಗೊಂದಲ ವರಿಷ್ಠರು ಮತ್ತು ಸಿಎಂ ಬೊಮ್ಮಾಯಿ ಅವರನ್ನು ಕಾಡುತ್ತಿದೆ ಎನ್ನಲಾಗಿದೆ.

ಹಿರಿಯ ಸಚಿವರನ್ನು ಕೈ ಬಿಡುವ ಬಗ್ಗೆ ವರಿಷ್ಠರು ಸುಳಿವು ನೀಡಿದ್ದರೂ ಹಾಗೆ ಮಾಡಿದರೆ ಅದೇ ಸಮುದಾಯದ ಹೊಸಬರಿಗೆ ಅವಕಾಶ ನೀಡಬೇಕಾಗುತ್ತದೆ.  ಅಲ್ಲದೆ ಎಲ್ಲ ಹಿರಿಯರನ್ನು ಕೈ ಬಿಟ್ಟು ಹೊಸಬರನ್ನು ಮಾತ್ರ ಸೇರಿಸಿಕೊಂಡರೆ, ಸದನದಲ್ಲಿ ಸರಕಾರವನ್ನು ಬಲವಾಗಿ ಸಮರ್ಥನೆ ಮಾಡಿಕೊಳ್ಳುವುದು ಕಷ್ಟವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ವಲಸಿಗರಲ್ಲಿ ಕೆಲವರ ಕಾರ್ಯವೈಖರಿಯ ಬಗ್ಗೆ ಪಕ್ಷದ ನಾಯಕರಿಗೆ ತೃಪ್ತಿ ಇಲ್ಲ. ಆದರೆ ಸರಕಾರ ರಚನೆಗೆ ಕಾರಣರಾದವರನ್ನು ಕೈ ಬಿಟ್ಟರೆ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ ಎಂಬ ಆತಂಕ ಇದೆ ಎನ್ನಲಾಗುತ್ತಿದೆ.

ವಲಸಿಗರಿಂದಲೇ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುವೆ.– ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.