93 ಕೈದಿಗಳ ಬಿಡುಗಡೆಗೆ ಸಂಪುಟ ಅಸ್ತು
Team Udayavani, Oct 27, 2017, 7:27 AM IST
ಬೆಂಗಳೂರು: ಜೀವಾವಧಿ ಶಿಕ್ಷೆಗೊಳಗಾದ 93 ಕೈದಿಗಳ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ, ಬಳ್ಳಾರಿ, ಧಾರವಾಡ, ವಿಜಯಪುರ ಕೇಂದ್ರ ಕಾರಾ ಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿ ಸುತ್ತಿರುವ ಕೈದಿಗಳ ಸನ್ನಡತೆ ಹಾಗೂ ವಯಸ್ಸಿನ ಆಧಾರ ದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಬಿಡುಗಡೆಯಾಗುವ ಕೈದಿಗಳಲ್ಲಿ 86 ಜನ ಪುರುಷರು ಹಾಗೂ 7 ಜನ ಮಹಿಳೆಯರು ಸೇರಿದ್ದಾರೆ. ಬೆಂಗಳೂರು 41, ಮೈಸೂರು 16, ಬೆಳಗಾವಿ 13, ಕಲಬುರಗಿ 4, ವಿಜಯಪುರ 7, ಬಳ್ಳಾರಿ 9, ಧಾರವಾಡದ ಮೂವರು ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಹಿಂದೆ ಸ್ವಾತಂತ್ರ್ಯೋತ್ಸದ ಅಂಗವಾಗಿ ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿತ್ತು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ವಾಪಸ್ ಕಳುಹಿಸಿದ್ದರು. ಈಗ ತಾಂತ್ರಿಕ ಕಾರಣಗಳನ್ನು ಸರಿಪಡಿಸಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ಜಯಚಂದ್ರ ಹೇಳಿದರು.
ಸಂಪುಟದ ಪ್ರಮುಖ ತೀರ್ಮಾನಗಳು
ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿ 100 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣಕ್ಕೆ 18.75 ಕೋಟಿ ರೂ ಅಂದಾಜು ಮೊತ್ತಕ್ಕೆ ಅನುಮೋದನೆ.
ರಾಯಚೂರಿನ ಮಾನ್ವಿ ತಾಲೂಕಿನ ಮಲ್ಲಟ್ ಮತ್ತು 10 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಗೆ ಒಪ್ಪಿಗೆ
ಕರ್ನಾಟಕ ನಗರ ಸರಬರಾಜು ಮಂಡಳಿಯಿಂದ 13 ಯೋಜನೆಗಳಿಗೆ 398 ಕೋಟಿ ಪರಿಷ್ಕೃತ ಯೋಜನೆಗೆ ಒಪ್ಪಿಗೆ. ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲು ಸೂಚನೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಯೋಜನೆ ಜಾರಿಗೆ 10.35 ಕೋಟಿಗೆ ಒಪ್ಪಿಗೆ.
ಬೆಂಗಳೂರಿನ ಜೀವನ್ ಭೀಮಾನಗರದಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಡಿ. ದರ್ಜೆ ನೌಕರರ ವಸತಿ ಸಮುಚ್ಚಯ ನಿರ್ಮಾಕ್ಕೆ ಒಪ್ಪಿಗೆ.
ಬಿಬಿಎಂಪಿ ವ್ಯಾಪ್ತಿಗೊಳಪಡುವ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 1886 ಕೋಟಿಯಿಂದ 1500 ಕೋಟಿಗೆ ತಗ್ಗಿಸಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ಬಿಳಿಕಲ್ ಅರಣ್ಯ ಪ್ರದೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯ ಸ್ಥಾಪನೆಗೆ 32 ಕೋಟಿ ರೂ. ನೀಡಲು ಒಪ್ಪಿಗೆ
ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ 175 ಕೋಟಿ ಯೋಜನೆಗೆ ಕಾರ್ಯಕ್ರಮ ರೂಪಿಸಲು ಮುಖ್ಯಮಂತ್ರಿಗೆ ಜವಾಬ್ದಾರಿ. ನವೆಂಬರ್ 4ಕ್ಕೆ ಶ್ರವಣ ಬೆಳಗೊಳದಲ್ಲಿ ಸಿಎಂ ಸಭೆ.
700 ರೂ.ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಡಾ. ಆರ್. ಕೆ.ಬಾಲಾಜಿಗೆ ನಿವೃತ್ತಿ ಪಡೆಯಲು ಸಂಪುಟ ಒಪ್ಪಿಗೆ
ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ 371 ಜೆ ಅನ್ವಯ 126 ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ ಅನುಮತಿ.
ರಾಜ್ಯದ ಏಳು ಉಗ್ರಾಣಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಶೀತಲ ಗೃಹ ನಿರ್ಮಾಣಕ್ಕೆ ಒಪ್ಪಿಗೆ.
ಕಾರ್ಮಿಕ ಇಲಾಖೆ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಮೂಲಕ ಎಲ್ಲ ಯೋಜನೆಗಳನ್ನು ಕಾರ್ಮಿಕರಿಗೆ ತಲುಪಿಸಲು ಸಂಪುಟ ಒಪ್ಪಿಗೆ.
ಕಲಬುರಗಿ ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ 9 ವಸತಿ ನಿಲಯ ಸ್ಥಾಪನೆಗೆ ಒಪ್ಪಿಗೆ.
ಕಿತ್ತೂರು, ಬೈಲಹೊಂಗಲ ತಾಲೂಕಿನ 64 ಕೆರೆಗಳಿಗೆ ಮಲಪ್ರಭಾ ನದಿಯಿಂದ ನೀರು ತುಂಬಿಸಲು 440 ಕೋಟಿ ರೂ. ಯೋಜನೆಗೆ ಒಪ್ಪಿಗೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಬಳಿ 61 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅನುಮತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.