ಭದ್ರ ಜಲಾಶಯದಿಂದ 197 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಪುಟ ಅನುಮೋದನೆ
Team Udayavani, Nov 12, 2020, 4:31 PM IST
ಭದ್ರ ಜಲಾಶಯ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಬಯಲುಸೀಮೆ ಪ್ರದೇಶಗಳಿಗೆ ಭದ್ರ ಜಲಾಶಯದಿಂದ 1281.80 ಕೋಟಿ ವೆಚ್ಚದಲ್ಲಿ197 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ ಹಾಗೂ ಚಿಕ್ಕಮಗಳೂರು, ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು 197 ಕೆರೆಗಳನ್ನು ತುಂಬಿಸಲು 1281.80 ಕೋಟಿ ರೂ. ಯೋಜನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಯೋಜನೆಯು ಮೂರು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದ್ದು, ಮೊದಲನೇ ಹಂತದ ಯೋಜನೆಗೆ 406.50 ಕೋಟಿ, 2ನೇ ಹಂತದ ಯೋಜನೆಗೆ 298.60 ಕೋಟಿ ಹಾಗೂ 3ನೇ ಹಂತದ ಯೋಜನೆಯಲ್ಲಿ 476.07 ಕೋಟಿ ವೆಚ್ಚವಾಗಲಿದೆ.
ತರೀಕೆರೆ ತಾಲ್ಲೂಕಿನ 31, ಕಡೂರಿನ 114, ಚಿಕ್ಕಮಗಳೂರಿನ 48, ಹಾಗೂ ಹಾಸನ ಜಿಲ್ಲೆಯ ಅರಸೀಕೆರೆಯ 4 ಸೇರಿದಂತೆ ಒಟ್ಟು 197 ಕೆರೆಗಳನ್ನು ತುಂಬಿಸಲು1281.80 ಕೋಟಿ ವೆಚ್ಚ ಮಾಡಲಾಗುತ್ತದೆ. ಇದಕ್ಕಾಗಿ ಭದ್ರ ಜಲಾಶಯದಿಂದ 1.45 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.