ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ
Team Udayavani, Dec 6, 2021, 7:30 AM IST
ಬೆಂಗಳೂರು: ವಿಧಾನ ಪರಿಷತ್ ಚುನಾ ವಣೆ ನಡುವೆಯೇ ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಪಿಸು ಮಾತು ಕೇಳಿಬರತೊಡಗಿದೆ. ಅಧಿವೇಶನಕ್ಕೆ ಮೊದಲೇ ವಿಸ್ತರಣೆಯ ನಿರೀಕ್ಷೆಯಲ್ಲಿ ಕೆಲವರಿದ್ದರೆ, ಅಧಿವೇಶನ ಮುಗಿದ ಅನಂತರ ಆಗುವ ಲೆಕ್ಕಾಚಾರದಲ್ಲಿ ಕೆಲವು ಸಚಿವಾಕಾಂಕ್ಷಿಗಳಿದ್ದಾರೆ.
ಖಾಲಿ ಇರುವ 2 ಸ್ಥಾನಗಳ ಜತೆಗೆ ಕೆಲವು ಸಚಿವರನ್ನು ಕೈಬಿಟ್ಟು ಇನ್ನಷ್ಟು ಹೊಸಬರಿಗೆ ಅವಕಾಶ ಕಲ್ಪಿಸಿ ಕೊಡಬೇಕೆಂಬ ಬೇಡಿಕೆ ಇದ್ದು, ಪರಿಷತ್ ಚುನಾವಣೆಯ ಫಲಿ ತಾಂಶವೂ ಹಾಲಿ ಸಚಿವರ ಭವಿಷ್ಯ ನಿರ್ಧ ರಿಸಲಿದೆ ಎಂಬ ಮಾತು ಕೇಳಿಬರುತ್ತಿದೆ.
ಅಧಿವೇಶನಕ್ಕೆ ಮುನ್ನ ಅನುಮಾನ
ಡಿ. 13ರಂದು ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೆ ಮುನ್ನವೇ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ಮಾತು ಬಿಜೆಪಿ ವಲಯ ದಲ್ಲಿದೆ. ಮಾಜಿ ಸಿಎಂ ಯಡಿಯೂರಪ್ಪ ಇದಕ್ಕೆ ಪುಷ್ಟಿ ನೀಡು ವಂತೆ ಮಾತ ನಾಡಿದ್ದರೆ, ಶಾಸಕ ಬಸನಗೌಡ ಯತ್ನಾಳ್ ಸಂಪುಟ ವಿಸ್ತರಣೆಯ ಬಗ್ಗೆ ಮೇಲಿಂದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದು ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಲು ಕಾರಣವಾಗಿವೆ.
ಆದರೆ, ಡಿ. 10ರಂದು ವಿಧಾನ ಪರಿಷತ್ತಿಗೆ ಚುನಾವಣೆ ನಡೆಯಲಿದ್ದು, ಅದಕ್ಕೆ ಮೊದಲು ಸಂಪುಟ ವಿಸ್ತರಣೆ ಅನುಮಾನ ಎಂಬ ಅಭಿಪ್ರಾಯವಿದೆ.
ಇದನ್ನೂ ಓದಿ:ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14
ಚರ್ಚೆಯಾಗಿಲ್ಲ
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧಕ್ಷರ ನಡುವೆ ಹಾಗೂ ಪಕ್ಷದ ಯಾವುದೇ ಆಂತರಿಕ ಸಭೆಯಲ್ಲಿ ಚರ್ಚೆ ನಡೆದಿಲ್ಲ ಎಂಬ ಮಾಹಿತಿ ಲಭಿಸಿದೆ. ಚುನಾವಣೆ ಮತ್ತು ಅಧಿವೇಶನ ಇರುವ ಈ ಸನ್ನಿವೇಶದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವ ಸಂಭವ ಕಡಿಮೆ ಎಂದು ಬಿಜೆಪಿ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ರಮೇಶ್, ವಿಜಯೇಂದ್ರ ಸೇರ್ಪಡೆ?
ಸಂಪುಟ ವಿಸ್ತರಣೆ ಚರ್ಚೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರು ಕೇಳಿ ಬರುತ್ತಿವೆ. ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜತೆಗೆ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತಿರುವ ರಮೇಶ್ ಅಧಿವೇಶನಕ್ಕೆ ಮುನ್ನ ಮತ್ತೆ ಸಂಪುಟ ಸೇರಲು ಕಸರತ್ತು ನಡೆಸಿ ದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಅವರನ್ನೂ ಸೇರಿಸಿಕೊಳ್ಳಬೇಕೆಂಬ ಒತ್ತಡ ಹಿಂದಿನಿಂದಲೂ ಇದೆ. ಈ ಬಾರಿ ವಿಸ್ತರಣೆ ಆದರೆ ವಿಜಯೇಂದ್ರ ಅವರಿಗೆ ಸ್ಥಾನ ಖಚಿತ ಎಂಬ ಮಾತು ಅವರ ಆಪ್ತ ವಲಯದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.