ಸ್ವಿಸ್ ಪ್ರವಾಸದ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ
Team Udayavani, Jan 15, 2020, 3:00 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಸಂದರ್ಭದಲ್ಲೇ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಬೇಕಾದ ಅನಿವಾರ್ಯತೆಯಿದ್ದು, ಮರುದಿನವೇ ಮುಖ್ಯ ಮಂತ್ರಿಗಳು ಸ್ವಿಸ್ ಪ್ರವಾಸ ಕೈಗೊಳ್ಳಬೇಕಿರುವುದರಿಂದ ಸಂಪುಟ ವಿಸ್ತರಣೆ ಮಾಸಾಂತ್ಯಕ್ಕೆ ಮುಂದೂಡಿಕೆ ಯಾಗುವ ಸಾಧ್ಯತೆ ಹೆಚ್ಚಾಗಿದೆ.
ಸದ್ಯದ ಮಾಹಿತಿ ಪ್ರಕಾರ ಅಮಿತ್ ಶಾ ಜ.18ರ ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಹುಬ್ಬಳ್ಳಿಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ದಿನ ಸಮಾರಂಭ ವಿಳಂಬವಾದರೆ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಮಿತ್ ಶಾ ಅವರು ಜ.18ರ ಬೆಳಗ್ಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಎಂಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಸಮಯಾವಕಾಶ ಸಿಗುವುದೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ಹುಬ್ಬಳ್ಳಿ ಕಾರ್ಯಕ್ರಮ ಮುಗಿದ ಬಳಿಕ ಯಡಿಯೂರಪ್ಪ ಬೆಂಗಳೂರಿಗೆ ಹಿಂತಿರುಗಿ ಜ.19ರ ಬೆಳಗ್ಗೆ 10.45ಕ್ಕೆ ಸ್ವಿಸ್ ಪ್ರವಾಸ ಕೈಗೊಳ್ಳಬೇಕಿದೆ. ಒಂದೊಮ್ಮೆ ಸಂಪುಟ ವಿಸ್ತರಣೆಗೆ ಅಮಿತ್ ಶಾ ಅವರ ಒಪ್ಪಿಗೆ ಪಡೆದರೂ ನೂತನ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸುವುದು ಕಷ್ಟಸಾಧ್ಯವೆನಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿದ ನಂತರವೇ ಮುಂದುವರಿಯುವುದಾಗಿ ಸಿಎಂ ಹೇಳಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ತರಾತುರಿಯ ತೀರ್ಮಾನ ಸಾಧ್ಯವಾಗದು. ಹಾಗಾಗಿ ಸಿಎಂ ಸ್ವಿಸ್ ಪ್ರವಾಸದ ಬಳಿಕ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.