ಸಂಪುಟ ಸರ್ಜರಿ: ಮುಂದುವರಿದ ಅನಿಶ್ಚಿತತೆ

Team Udayavani, Nov 16, 2020, 6:30 AM IST

ಸಂಪುಟ ಸರ್ಜರಿ: ಮುಂದುವರಿದ ಅನಿಶ್ಚಿತತೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫ‌ಲಿತಾಂಶ ಪ್ರಕಟವಾಗಿ ವಾರ ಸಮೀಪಿಸುತ್ತಿದ್ದರೂ ಬಿಜೆಪಿ ವರಿಷ್ಠರಿಂದ ಯಾವುದೇ ಮಾಹಿತಿ ಬಾರದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಸಂಬಂಧ ಅನಿಶ್ಚಿತತೆ ಮುಂದುವರಿದಿದೆ.

ಉಪ ಚುನಾವಣ ಫ‌ಲಿತಾಂಶ ಪ್ರಕಟವಾದ ಬೆನ್ನಲ್ಲೇ ಎರಡು – ಮೂರು ದಿನಗಳಲ್ಲಿ ವರಿಷ್ಠರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿ ಬಳಿಕ ದಿಲ್ಲಿಗೆ ತೆರಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ ಈವರೆಗೆ ವರಿಷ್ಠರಿಂದ ಯಾವುದೇ ಮಾಹಿತಿ, ಸಂದೇಶ ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ದಿಲ್ಲಿ ಪ್ರವಾಸ ಇನ್ನೂ ನಿಗದಿಯಾಗಿಲ್ಲ.

ದೀಪಾವಳಿ ಬಳಿಕ ಸಿಎಂ ದಿಲ್ಲಿಗೆ ತೆರಳಲಿದ್ದಾರೆಂಬ ಮಾತುಗಳಿವೆ. ಆದರೆ ಬಿಹಾರದಲ್ಲಿ ಬಿಜೆಪಿ ಸರಕಾರ ರಚನೆ ಬಳಿಕವಷ್ಟೇ ವರಿಷ್ಠರು ರಾಜ್ಯ ಸಂಪುಟ ಸರ್ಜರಿ ಸಂಬಂಧ ಸಿಎಂ ಜತೆಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ನಡುವೆ ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದರೆ ಸಂಪುಟ ಸರ್ಜರಿ ಇನ್ನಷ್ಟು ವಿಳಂಬವಾಗಲಿದೆ.

ಆಕಾಂಕ್ಷಿಗಳಲ್ಲೂ ಗೊಂದಲ
ಸಂಪುಟಕ್ಕೆ ಸರ್ಜರಿಯ ಸುಳಿವು ಸಿಗುತ್ತಿದ್ದಂತೆ ಸಚಿವಾಕಾಂಕ್ಷಿಗಳು ಸಿಎಂ ಅವರನ್ನು ಭೇಟಿಯಾಗಿ ಸ್ಥಾನಮಾನಕ್ಕಾಗಿ ಮನವಿ ಮಾಡಲಾರಂಭಿಸಿದ್ದರು. ಇನ್ನು ಕೆಲವರು ನಾನಾ ರೀತಿಯಲ್ಲಿ ಒತ್ತಡ ಹೇರಲು ಮುಂದಾಗಿದ್ದರು. ಈ ನಡುವೆ ಕೆಲವು ಬಿಜೆಪಿ ಶಾಸಕರ ಗುಂಪು ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಬಾರದು ಎಂಬುದಾಗಿ ಸಚಿವ ಜಾರಕಿಹೊಳಿ ಅವರಲ್ಲಿ ಒತ್ತಡ ಹೇರಿತ್ತು.

ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ನಾನಾ ರೀತಿಯ ತಂತ್ರ, ಲಾಬಿಯ ಮೊರೆ ಹೋದ ಆಕಾಂಕ್ಷಿಗಳು ದಿಲ್ಲಿ ಮಟ್ಟದಲ್ಲೂ ಒತ್ತಡ ಹೇರುವ ಪ್ರಯತ್ನ ನಡೆಸಲು ಚಿಂತಿಸಿದ್ದರು. ಆದರೆ ಬಿಹಾರ ಸರಕಾರ ರಚನೆಯಲ್ಲಿ ರಾಷ್ಟ್ರೀಯ ನಾಯಕರು ಸಕ್ರಿಯರಾಗಿದ್ದರೆ, 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಂಘಟನ ಪ್ರವಾಸದ ತಯಾರಿಯಲ್ಲಿದ್ದು, ದಿಲ್ಲಿ ಪ್ರವಾಸ ಕೈಗೊಳ್ಳಬೇಕೇ, ಬೇಡವೇ ಎಂಬ ಗೊಂದಲ ಆಕಾಂಕ್ಷಿಗಳದು.

ಟಾಪ್ ನ್ಯೂಸ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.