Congress: ಡಿಸೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ: ಪರಮೇಶ್ವರ್
ನಾಗೇಂದ್ರ ಕ್ಲೀನ್ಚಿಟ್ ತೆಗೆದುಕೊಂಡರೆ ನೋಡೋಣ
Team Udayavani, Nov 13, 2024, 9:50 PM IST
ಬೆಂಗಳೂರು: ಸಂಪುಟ ಪುನಾರಚನೆ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರ. ಡಿಸೆಂಬರ್ ಅನಂತರ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಮುಂದಾಗಬಹುದು ಅಂತ ಕೂಡ ಹೇಳಲಾಗುತ್ತಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ದಿಲ್ಲಿಗೆ ಹೋದಾಗ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿತ್ತು. ಡಿಸೆಂಬರ್ ಅನಂತರ ಪುನಾರಚನೆ ಆಗಬಹುದು. ಈ ಬಗ್ಗೆ ಹೈಕಮಾಂಡ್ನವರು ಮತ್ತು ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ. ನಮ್ಮ ಹಂತದಲ್ಲಿ ಆ ಬಗ್ಗೆ ಏನೂ ಚರ್ಚೆಯಾಗಿ, ಆಗುವುದೂ ಇಲ್ಲ ಎಂದರು.
ಮಾಜಿ ಸಚಿವ ಬಿ. ನಾಗೇಂದ್ರ ಮರುಸೇರ್ಪಡೆ ಬಗ್ಗೆ ಕೇಳಿದಾಗ, ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಕ್ಲೀನ್ಚಿಟ್ ತೆಗೆದುಕೊಂಡು ಬಂದರೆ ನೋಡೋಣ. ಸಂಪುಟಕ್ಕೆ ತೆಗೆದುಕೊಳ್ಳುವುದು ಸಿಎಂಗೆ ಬಿಟ್ಟಿದ್ದು. ಒಂದು ವೇಳೆ ತಪ್ಪಿಲ್ಲ ಅಂತಾದರೆ, ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಿ, ಪ್ರಕರಣವೊಂದರಲ್ಲಿ ಕ್ಲೀನ್ಚಿಟ್ ಸಿಕ್ಕ ಅನಂತರ ಮರುಸೇರ್ಪಡೆಯಾಗಿಲ್ಲವೇ?. ಸದ್ಯಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣದ ಬಗ್ಗೆ ಯಾವುದೇ ತನಿಖಾ ತಂಡ ಇನ್ನೂ ವರದಿ ನೀಡಿಲ್ಲ. ಮುಂದಕ್ಕೆ ನೋಡೋಣ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.