ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸುತ್ತೇನೆ
Team Udayavani, Jun 20, 2019, 3:03 AM IST
ಲಿಂಗಸುಗೂರು: “ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿದ್ದೇನೆ. ಒಂದು ವೇಳೆ ಜವಾಬ್ದಾರಿ ಕೊಟ್ಟರೆ ನಾನು ಸಮರ್ಥವಾಗಿ ನಿಭಾಯಿಸುವೆ. ಇಲ್ಲದಿದ್ದರೆ ಬಿಜೆಪಿ ಸದಸ್ಯನಾಗಿರುವೆ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಆಪರೇಷನ್ ಕಮಲ’ಕ್ಕೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಸಮ್ಮಿಶ್ರ ಸರ್ಕಾರದ ಎರಡು ಪಕ್ಷಗಳ ಮುಖಂಡರ ಕಚ್ಚಾಟದಿಂದ ಸರ್ಕಾರ ಬಿದ್ದು ಹೋಗುತ್ತದೆ. ಹೀಗಾಗಿ, ಬಿಜೆಪಿ ಸರ್ಕಾರ ರಚನೆಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದರು.
ಸಮ್ಮಿಶ್ರ ಸರ್ಕಾರದ ಕಚ್ಚಾಟದಿಂದಾಗಿ ಅಭಿವೃದ್ಧಿ ವಿಷಯದಲ್ಲಿ ಉತ್ತರ ಕರ್ನಾಟಕ ಸಂಪೂರ್ಣ ನಿರ್ಲಕ್ಷಕ್ಕೊಳಗಾಗಿದೆ. ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದಿಂದ ಫೈವ್ಸ್ಟಾರ್ ಹೋಟೆಲ್ನಲ್ಲಿ ತಂಗಿದ್ದರು. ಅದರ ಖರ್ಚು ವೆಚ್ಚವನ್ನು ಸರ್ಕಾರದ ಬೊಕ್ಕಸದಿಂದ ಭರಿಸಿ ಸರ್ಕಾರಕ್ಕೆ ಹೊರೆ ಮಾಡಿದ್ದಾರೆ. ಈಗ ಶಾಲೆ, ಗ್ರಾಮದಲ್ಲಿ ವಾಸ್ತವ್ಯ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ಲೋಕಸಭೆ ಚುನಾವಣೆಯಲ್ಲಿ ಇವರಿಗೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ನಿಖೀಲ್ ಸೋಲಿನಿಂದಾಗಿ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.