2 ದಿನಗಳಲ್ಲಿ ಅಭ್ಯರ್ಥಿ ಬಿಜೆಪಿ ಕೋರ್ ಕಮಿಟಿ ತೀರ್ಮಾನ
Team Udayavani, Nov 10, 2021, 7:10 AM IST
ಬೆಂಗಳೂರು: ಸ್ಥಳೀಯ ಸಂಸ್ಥೆ ಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾ ವಣೆ ಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ, ಅನಂತರ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೋರ್ ಕಮಿಟಿ ತೀರ್ಮಾನಿಸಿದೆ.
ಬೇರೆ ಪಕ್ಷಗಳಿಂದ ಬಿಜೆಪಿಗೆ ಬರಲು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು ವರದಿ ಸಲ್ಲಿಸುವಂತೆ ಸೂಚಿಸ ಲಾಗಿದೆ ಎಂದು ತಿಳಿದು ಬಂದಿದೆ.
ವಿಧಾನಪರಿಷತ್ ಚುನಾವಣೆಯಷ್ಟೇ ಅಲ್ಲದೆ, ಜಿಲ್ಲಾ ಮತ್ತು ತಾ.ಪಂ. ಹಾಗೂ ಬಿಬಿಎಂಪಿ ಚುನಾವಣೆಗೂ ಸಜ್ಜಾಗ ಬೇಕು. ಕೇಂದ್ರ – ರಾಜ್ಯ ಸರಕಾರಿ ಯೋಜನೆಗಳ ಬಗ್ಗೆ ಜನ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಲಾಯಿತು ಎನ್ನಲಾಗಿದೆ.
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಸಂಬಂಧ 2 ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸ ಲಾಗುವುದು ಎಂದು ಸಭೆಯ ಅನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಕುರಿತು ಚರ್ಚೆಯಾಗಿದೆ. ಜಿಲ್ಲೆಗಳಿಂದ ಶಾಸಕರು, ಸಂಸದರು ಮತ್ತು ಮುಖಂಡರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಎರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧ ಪಡಿಸಲಾಗುವುದು.
ಇದನ್ನೂ ಓದಿ:ಭಾರತೀಯ ನೌಕಾಪಡೆಗೆ ಐಎನ್‌ಎಸ್ ವೇಲಾ ಸೇರ್ಪಡೆ
ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಚರ್ಚೆ ನಡೆದಿತ್ತಾದರೂ ಜಿಲ್ಲಾ ಮಟ್ಟ ದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲು ಕೋರ್ ಕಮಿಟಿ ಸಭೆ ಯಲ್ಲಿ ತೀರ್ಮಾನವಾಯಿತು. ಅದ ರಂತೆ ಎರಡು ದಿನಗಳ ಕಾಲ ಅಭಿ ಪ್ರಾಯ ಪಡೆದು ವರದಿ ನೀಡಿದ ಅನಂತರ ರಾಜ್ಯಾಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ.
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಪಕ್ಷಗಳಿಂದ ಬರುವವರ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಯಾಗಿದೆ. ಆದರೆ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ.
ಎರಡು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಬಗ್ಗೆಯೂ ಚರ್ಚೆಯಾಗಿದೆ. ಎಲ್ಲ ಕ್ಷೇತ್ರಗಳಲ್ಲಿ 2- 3 ಹೆಸರುಗಳು ಪ್ರಸ್ತಾವಗೊಂಡಿವೆ. ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ನ. 18ರಿಂದಲೇ ಜನಸ್ವರಾಜ್ ಯಾತ್ರೆ
ಜನಸ್ವರಾಜ್ ಯಾತ್ರೆಯನ್ನು ನ. 19ರ ಬದಲು ನ. 18 ರಿಂದಲೇ ಪ್ರಾರಂಭಿಸಲಾಗುವುದು. ನಾಲ್ಕು ತಂಡಗಳಲ್ಲಿ ರಾಜ್ಯಾದ್ಯಂತ ಜನಸ್ವರಾಜ್ ಯಾತ್ರೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.